ಕೂಳೂರು ಕಾವೂರು ಮುಸ್ಲಿಂ ಒಕ್ಕೂಟದಿಂದ ಆ್ಯಂಬುಲೆನ್ಸ್ ಲೋಕಾರ್ಪಣೆ

Update: 2024-09-16 13:34 GMT

ಮಂಗಳೂರು: ಕೂಳೂರು ಕಾವೂರು ಮುಸ್ಲಿಂ ಒಕ್ಕೂಟ (ರಿ)ದ ವತಿಯಿಂದ ಸಾರ್ವಜನಿಕರ ಸೇವೆಗಾಗಿ ಆ್ಯಂಬ್ಯುಲೆನ್ಸ್ ಲೋಕಾರ್ಪಣೆ ಕಾರ್ಯಕ್ರಮವು ಸೋಮವಾರ ಕಾವೂರು ಜಂಕ್ಷನ್‌ನಲ್ಲಿ ನಡೆಯಿತು.

ಒಕ್ಕೂಟದ ಗೌರವಾಧ್ಯಕ್ಷ ಹಾಜಿ ಶೇಖುಂಞಿ ಉಚಿತ ಆ್ಯಂಬುಲೆನ್ಸ್ ಸೇವೆಗೆ ಚಾಲನೆ ನೀಡಿದರು. ಕೂಳೂರು ಮುಹಿಯ್ಯುದ್ದೀನ್ ಜುಮಾ ಮಸೀದಿಯ ಖತೀಬ್ ಹಾಫಿಝ್ ಮುಹಮ್ಮದ್ ಉವೈಸಿ ಹಿಷಾಮಿ ದುಆ ನೆರವೇರಿಸಿದರು. ಒಕ್ಕೂಟದ ಅಧ್ಯಕ್ಷ ಹುಸೈನ್ ರಿಯಾಝ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಅತಿಥಿಗಳಾಗಿ ಕಾವೂರು ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕ ಪ್ರಕಾಶ್ ಭಟ್, ಕೂಳೂರು ಸಂತ ಅಂತೋನಿ ದೇವಾಲಯದ ಧರ್ಮಗುರು ವಿಜಯ ವಿಕ್ಟರ್ ಲೋಬೋ, ಕಾರ್ಪೊರೇಟರ್ ಅನಿಲ್ ಕುಮಾರ್ ಭಾಗವಹಿಸಿದ್ದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯ ರಿಯಾಝ್ ಕಡಂಬು, ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚ ದ.ಕ. ಜಿಲ್ಲಾಧ್ಯಕ್ಷ ಶಾನ್‌ವಾಝ್, ಸಿಪಿಎಂ ಮುಖಂಡ ದಯಾನಂದ ಶೆಟ್ಟಿ, ಡಾ.ಸಿದ್ದೀಕ್ ಅಡ್ಡೂರು, ಕೂಳೂರು ಮುಹಿಯುದ್ದೀನ್ ಜುಮಾ ಮಸೀದಿಯ ಅಧ್ಯಕ್ಷ ಅಬ್ಬಾಸ್ ಹಾಜಿ, ಕುಂಜತ್ತಬೈಲ್ ಸಿದ್ದೀಕ್ ಜುಮಾ ಮಸೀದಿಯ ಅಧ್ಯಕ್ಷ ಕೆ.ಸಿ. ಅಬ್ದುಲ್ ಖಾದರ್, ಬೊಂದೇಲ್ ಮುಹಿಯುದ್ದೀನ್ ಜುಮಾ ಮಸೀದಿಯ ಅಧ್ಯಕ್ಷ ಹಸನಬ್ಬ ಹಾಜಿ, ಮರಕಡ ಮಸ್ಜಿದುಲ್ ಬಿಲಾಲ್ ಅಧ್ಯಕ್ಷ ಮುನೀರ್, ಮಾಜಿ ಅಧ್ಯಕ್ಷ ಶರೀಫ್ ಕೂಳೂರು ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ನಿಸಾರ್ ಸ್ವಾಗತಿಸಿದರು. ಸದಸ್ಯ ರಹ್ಮಾನ್ ಖಾನ್ ಕುಂಜತ್ತಬೈಲ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News