ಕಾನೂನು ಸೇವಾ ಪ್ರಾಧಿಕಾರದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Update: 2024-09-26 14:58 GMT

ಮಂಗಳೂರು : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದ.ಕ. ಮಂಗಳೂರು ವತಿಯಿಂದ ಸ್ಥಾಪಿಸಲಾದ ಕಾನೂನು ಅಭಿರಕ್ಷಕರ ಕಚೇರಿಗೆ ಎರಡು ಉಪಮುಖ್ಯ ಕಾನೂನು ನೆರವು ಅಭಿರಕ್ಷಕರು ಐದು ಸಹಾಯಕ ಕಾನೂನು ನೆರವು ಅಭಿರಕ್ಷಕರು ಎರಡು ಕಚೇರಿ ಸಹಾಯಕರ ಹುದ್ದೆ ಹಾಗೂ ಎರಡು ದಲಾಯತ್ ಹುದ್ದೆಯನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಇದ್ಯಾರ್ಹತೆ ಹಾಗೂ ಪೂರಕ ದಾಖಲೆಗಳ ಪ್ರತಿಯೊಂದಿಗೆ ಅಕ್ಟೋಬರ್ ೩ರೊಳಗೆ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯಾಲಯ ಆವರಣ ಮೊದಲನೇ ಮಹಡಿ ದ.ಕ. ಮಂಗಳೂರು ಇವರಿಗೆ ನೇರವಾಗಿ ಅಥವಾ ಅಂಚೆ ಮೂಲಕ ತಲುಪಿಸಬೇಕು.

ಅರ್ಜಿ ನಮೂನೆಯನ್ನು ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಲ್ಲಿ ಅಥವಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದ.ಕ. ಮಂಗಳೂರು ಕಚೇರಿಯಲ್ಲಿ ಬಂದು ಪಡೆಯಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ರವೀಂದ್ರ ಎಂ.ಜೋಶಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶೋಭಾ ಬಿ.ಜಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News