ವಡ್ಡರ್ಸೆ ರಘುರಾಮ ಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2024-10-04 13:29 GMT

ಮಂಗಳೂರು,ಅ.4: ಹಿರಿಯ ಪತ್ರಕರ್ತ ದಿ. ವಡ್ಡರ್ಸೆ ರಘುರಾಮ ಶೆಟ್ಟಿ ಅವರ ನೆನಪಿನಾರ್ಥ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ 2024-25ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಪ್ರಶಸ್ತಿಯು 2 ಲಕ್ಷ ರೂ. ನಗದು, ಸ್ಮರಣಿಕೆ ಒಳಗೊಂಡಿದೆ.

ಈ ಪ್ರಶಸ್ತಿಗೆ ಪತ್ರಕರ್ತರಿಂದ ಅರ್ಜಿ ಆಹ್ವಾನಿಸಲಾಗಿದೆ ಹಾಗೂ ಸಾರ್ವಜನಿಕರು, ಸಂಘ-ಸಂಸ್ಥೆಗಳು ಅರ್ಹ ಪತ್ರಕರ್ತ ರನ್ನು ಪ್ರಶಸ್ತಿಗೆ ನಾಮನಿರ್ದೇಶನ ಮಾಡಬಹುದಾಗಿದೆ.

ಮುದ್ರಣ ಅಥವಾ ವಿದ್ಯುನ್ಮಾನ ಮಾಧ್ಯಮ ಕ್ಷೇತ್ರದಲ್ಲಿ ಕನಿಷ್ಟ 15 ವರ್ಷ ಸೇವಾನುಭವ ಹೊಂದಿರಬೇಕು. ಹಿರಿಯರಿಗೆ ಆದ್ಯತೆ ನೀಡಲಾಗುವುದು. ಸಾಮಾಜಿಕ ನ್ಯಾಯದ ಕಾಳಜಿ ಹೊಂದಿರುವ 10 ರಿಂದ 15 ಲೇಖನಗಳು ಪ್ರಕಟವಾಗಿ ರಬೇಕು ಅಥವಾ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಈ ಕುರಿತು ವಿಶೇಷ ವರದಿ, ಚರ್ಚೆ, ಸಂವಾದ ಹಾಗೂ ಇನ್ನಿತರೆ ಕಾರ್ಯಕ್ರಮಗಳನ್ನು ನಿರ್ಮಿಸಿರಬೇಕು.

ನಾಮನಿರ್ದೇಶನಗಳನ್ನು ಸಲ್ಲಿಸಲು ಅ.21 ಕೊನೆಯ ದಿನವಾಗಿದೆ. ನಾಮನಿರ್ದೇಶನಗಳನ್ನು ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಂ.17, ವಾರ್ತಾಸೌಧ, ಭಗವಾನ್ ಮಹಾವೀರರಸ್ತೆ, (ಇನ್‌ಫೆಂಟ್ರಿ ರಸ್ತೆ), ಬೆಂಗಳೂರು 560 001 ಈ ವಿಳಾಸಕ್ಕೆ ಖುದ್ದಾಗಿ ಅಥವಾ ಅಂಚೆ ಅಥವಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜಿಲ್ಲಾ ಅಧಿಕಾರಿಗಳ ಮೂಲಕ ಸಲ್ಲಿಸಬಹುದು ಎಂದು ಇಲಾಖೆಯ ಆಯುಕ್ತ ಹೇಮಂತ್ ಎಂ.ನಿಂಬಾಳ್ಕರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News