ದ.ಕ. ಜಿಲ್ಲಾ ಮಟ್ಟದ ಪ.ಪೂ. ಕಾಲೇಜುಗಳ ಕುಸ್ತಿ ಪಂದ್ಯಾಟ: ಆಳ್ವಾಸ್‌ಗೆ ಪ್ರಶಸ್ತಿ

Update: 2024-10-05 12:42 GMT

ದೇರಳಕಟ್ಟೆ: ಮೂಡುಬಿದಿರೆ ಪದವಿ ಪೂರ್ವ ಶಿಕ್ಷಣ ಇಲಾಖೆ ದಕ್ಷಿಣ ಕನ್ನಡ ಮತ್ತು ಯೆನಪೋಯ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ದೇರಳಕಟ್ಟೆಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಆಳ್ವಾಸ್‌ಗೆ ಕಾಲೇಜಿನ ವಿದ್ಯಾರ್ಥಿಗಳು ಹುಡುಗರ ವಿಭಾಗದಲ್ಲಿ 5 ಚಿನ್ನ, 3 ಬೆಳ್ಳಿ ಹಾಗೂ 1 ಕಂಚು ಒಟ್ಟು 9 ಪದಕ ಪಡೆದು ಪ್ರಥಮ ಸ್ಥಾನವನ್ನು ಪಡೆದುಕೊಂಡರು. ಹುಡುಗಿಯರ ವಿಭಾಗದಲ್ಲಿ 5 ಚಿನ್ನ, 3 ಬೆಳ್ಳಿ ಹಾಗೂ 2 ಕಂಚು ಒಟ್ಟು 10 ಪದಕ ಪಡೆದು ಪ್ರಥಮ ಸ್ಥಾನವನ್ನು ಪಡೆದುಕೊಂಡರು.

ವಿಜೇತ ಕ್ರೀಡಾಪಟುಗಳಿಗೆ ಸಂಸ್ಥೆಯ ಅಧ್ಯಕ್ಷ ಡಾ.ಎಂ ಮೋಹನ ಆಳ್ವರು ಅಭಿನಂದಿಸಿದ್ದಾರೆ

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News