ಅಲ್ವಸಂಖ್ಯಾತ ವಿದ್ಯಾರ್ಥಿಗಳ ಫೆಲೋಶಿಪ್‌ಗೆ ಅರ್ಜಿ ಆಹ್ವಾನ

Update: 2024-10-05 12:55 GMT

ಮಂಗಳೂರು: ದ.ಕ. ಜಿಲ್ಲೆಯಲ್ಲಿ 2024-25ನೇ ಸಾಲಿನಲ್ಲಿ ಪಿಎಚ್‌ಡಿ ಸಂಶೋಧನೆ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳ ಫೆಲೋಶಿಪ್‌ಗೆ ಅರ್ಜಿ ಸಲ್ಲಿಸಲು ಅ.31ರವರೆಗೆ ಅವಧಿ ವಿಸ್ತರಿಸಲಾಗಿದೆ.

ರಾಜ್ಯದ ಅಂಗೀಕೃತ ವಿಶ್ವವಿದ್ಯಾಲಯಗಳಲ್ಲಿ ಪೂರ್ಣಕಾಲಿಕವಾಗಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ 3 ವರ್ಷಗಳ ಅವಧಿಗೆ ಜೆಆರ್‌ಎಫ್ ಮಾದರಿಯಲ್ಲಿ ಫೆಲೋಶಿಪ್ ನೀಡಲಾಗುತ್ತದೆ. ಸೇವಾಸಿಂಧು ಪೋರ್ಟಲ್  https://sevasindhuservices.karnataka.gov.in/  ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬೇಕು.

ಅರ್ಜಿಗಳನ್ನು ಸಲ್ಲಿಸುವ ವಿಧಾನ ಮತ್ತು ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವೆಬ್‌ಸೈಟ್ dom.karnataka.gov.in ಅಥವಾ ಜಿಲ್ಲಾ/ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News