‘ಶತ್ರಂಜ್’ ರಾಷ್ಟ್ರೀಯ ಮಟ್ಟದ ಅಂತರ್ ಕಾಲೇಜು ಪ್ರತಿಭಾ ಪುರಸ್ಕಾರ

Update: 2024-10-06 14:06 GMT

ಮಂಗಳೂರು: ಸ್ಕೂಲ್ ಆಫ್ ಸೋಷಿಯಲ್ ವರ್ಕ್ ರೋಶನಿ ನಿಲಯದಲ್ಲಿ ಇತ್ತೀಚೆಗೆ ನಡೆದ ‘ಶತ್ರಂಜ್’-2024 ರಾಷ್ಟ್ರೀಯ ಮಟ್ಟದ ಅಂತರ್ ಕಾಲೇಜು ಪ್ರತಿಭಾ ಸ್ಪರ್ಧೆಯಲ್ಲಿ ಇನ್‌ಸ್ಟಿಟ್ಯೂಟ್ ಆಫ್ ಕಮ್ಯುನಿಕೇಷನ್ ದೇರಳಕಟ್ಟೆ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ.

ಪೂರ್ಣ ಪ್ರಜ್ಞಾ ಕಾಲೇಜು ಉಡುಪಿ ರನ್ನರ್ ಅಫ್ ಪ್ರಶಸ್ತಿಯನ್ನು ಪಡೆದುಕೊಂಡಿತು. ಕಾಲೇಜಿನ ಸಭಾಂಗಣದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ವಿತರಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕನ್ನಡ ಹಾಗೂ ತುಳು ಚಿತ್ರರಂಗದ ಖ್ಯಾತ ಯುವ ನಟರಾದ ಅನೂಪ್ ಸಾಗರ್ ಅರ್ಜುನ್ ಕಾಫಿಕಾಡ್ ಭಾಗವಹಿಸಿದ್ದರು.

ಖ್ಯಾತ ಹಾಸ್ಯ ನಟ ಅರ್ಪಿತ್ ಇಂದ್ರವದನ್ ರವರಿಂದ ಹಾಸ್ಯ ಸಂಜೆ ಕಾರ್ಯಕ್ರಮ ನಡೆಯಿತು. ಕಾಲೇಜಿನ ರಿಜಿಸ್ಟ್ರಾರ್ (ಪರೀಕ್ಷಾಂಗ) ಪ್ರೊ.ಸಿಸಿಲಿಯಾ ಫರೀದ ಗೋವಿಯಸ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಮಹೇದ್ ಸಾದಿಯಾ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಹಾಗೂ ಸ್ಪರ್ಧೆಯ ಸಂಯೋಜಕರಾದ ಸಹಾಯಕ ಪ್ರಾಧ್ಯಾಪಕಿ ಸಾರಿಕ್ ಅಂಕಿತಾ ಸ್ಪರ್ಧಾಳುಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ವಿದ್ಯಾರ್ಥಿ ಸಂಘದ ಸಾಂಸ್ಕೃತಿಕ ಕಾರ್ಯದರ್ಶಿ ಥೆರೆಸಾ ವಂದಿಸಿದರು. ವೇದಿಕೆಯಲ್ಲಿ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಅಲೆಕ್ಸ್ ಉಪಸ್ಥಿತರಿದ್ದರು. 26 ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. 

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News