ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ: ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿಗಳಿಗೆ ಚಿನ್ನದ ಪದಕ

Update: 2024-10-08 16:05 GMT

ಉಪ್ಪಿನಂಗಡಿ: ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ದಸರಾ ಕ್ರೀಡಾಕೂಟದ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಉಪ್ಪಿನಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ.

ಮೈಸೂರು ವಿಭಾಗವನ್ನು ಪ್ರತಿನಿಧಿಸಲು ಆಯ್ಕೆಯಾದ ಉಪ್ಪಿನಂಗಡಿ ಕಾಲೇಜಿನ ವಿದ್ಯಾರ್ಥಿಗಳಾದ ಚರಣ್, ಮಹಮ್ಮದ್ ಫಾರಾನ್ , ಲಿಖಿತ ಹಾಗೂ ಧನುಷ ಇವರುಗಳು ಪುರುಷರ ಹಾಗೂ ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕವನ್ನು ಪಡೆದಿರುತ್ತಾರೆ.

ಈ ವಿದ್ಯಾರ್ಥಿಗಳು ಈ ಹಿಂದೆ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಹಾಗೂ ಮೈಸೂರು ವಿಭಾಗ ದಸರಾ ಕ್ರೀಡಾಕೂಟ ಗಳಲ್ಲಿ ಪ್ರತಿನಿಧಿಸಿ ಪ್ರಶಸ್ತಿ ಪಡೆದು ರಾಜ್ಯಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News