ಕಲ್ಲೂರು ಎಜುಕೇಶನ್ ಟ್ರಸ್ಟ್‌ನಿಂದ ರಕ್ತದಾನ ಶಿಬಿರ

Update: 2024-10-11 12:06 GMT

ಮುಡಿಪು, ಅ.11: ರಾಜಕೀಯ ರಹಿತವಾಗಿ ಆರೋಗ್ಯಯುತ ಕಾರ್ಯದಲ್ಲಿ ಕಲ್ಲೂರು ಎಜುಕೇಶನ್ ಟ್ರಸ್ಟ್ ಆಯೋಜಿಸು ತ್ತಿದ್ದು, ವಿದ್ಯಾರ್ಥಿಗಳಲ್ಲಿ ರಕ್ತದಾನದ ಜಾಗೃತಿ ಮೂಡಿಸಲು ನಿರಂತರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ ಎಂದು ಕಲ್ಲೂರು ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಇಬ್ರಾಹಿಂ ಕಲ್ಲೂರು ಹೇಳಿದ್ದಾರೆ.

ಕಾಲೇಜು ಶಿಕ್ಷಣ ಇಲಾಖೆ, ಮುಡಿಪು ಸರಕಾರಿ ಪ್ರಥಮ ದರ್ಜೆ ಕಾಲೇಜು, ಕಲ್ಲೂರು ಎಜುಕೇಶನ್ ಟ್ರಸ್ಟ್ ಕಾರವಾರ ಇದರ ಆಶ್ರಯದಲ್ಲಿ ಯೂತ್‌ರೆಡ್ ಕ್ರಾಸ್ , ಎನ್‌ಎಸ್‌ಎಸ್ ರೇಂಜರ್ಸ್-ರೋರ್ಸ್‌ ಘಟಕದ ಹಿರಿಯ ವಿದ್ಯಾರ್ಥಿ ಸಂಘದ ಆಶ್ರಯ ದಲ್ಲಿ ಮುಡಿಪು ಕಾಲೇಜು ಸಭಾಂಗಣದಲ್ಲಿ ಜರಗಿದ ರಕ್ತದಾನ ಶಿಬಿರ ಹಾಗೂ ಮಾಹಿತಿ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲ ಡಾ.ಸತೀಶ್ ಗಟ್ಟಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಮಂಗಳೂರು ವಿ.ವಿ ಮಾಜಿ ಕುಲಸಚಿವ ಡಾ. ಎ.ಎಂ.ಖಾನ್ ಆರೋಗ್ಯ ಶಿಬಿರ ಸಂಚಾಲಕ ಅಝೀಝ್ ಕಲ್ಲೂರು, ಸಂದೀಪ್ ರೇವಣ್ಕರ್ ಕಾರವಾರ ಉಪಸ್ಥಿತರಿದ್ದರು.

ಸಾಧಕರಾದ ಸತೀಶ್ ಗಟ್ಟಿ, ಮುರುಳಿ ಮೋಹನ್ ಚೂಂತಾರು, ಹೈದರ್ ಅಲಿ, ನಾಗೇಶ್ ಕಲ್ಲೂರು, ಉಮ್ಮರ್ ಕುಂಞಿ ಸಾಲೆತ್ತೂರು, ಡಾ. ಗಣೇಶ್ ಪ್ರಸಾದ್ ಅವರನ್ನು ಸನ್ಮಾನಿಸಲಾಯಿತು.

ಯೂತ್ ರೆಡ್‌ಕ್ರಾಸ್ ಸಂಚಾಲಕ ಪ್ರೊ. ಹೈದರ್ ಆಲಿ ಸ್ವಾಗತಿಸಿದರು. ರೇಂಜರ್ ಘಟಕದ ಸಂಚಾಲಕಿ ಅಕ್ಷತಾ ಸುವರ್ಣ ರಕ್ತದಾನಿಗಳ ವಿವರ ನೀಡಿದರು. ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಶೋಭಾಮಣಿ ವಂದಿಸಿದರು. ಮರಿಯಂ ಸಫೀದಾ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News