ಸಂಪಿಗೆದಡಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಯಕ್ಷಗಾನ ತಾಳಮದ್ದಳೆ

Update: 2024-10-11 12:17 GMT

ಮಂಗಳೂರು, ಅ.11: ನಮ್ಮ ಸಂಸ್ಕೃತಿ ಮತ್ತು ಜನಜೀವನದೊಂದಿಗೆ ಹಾಸು ಹೊಕ್ಕಾಗಿರುವುದು ಭಾರತೀಯ ಲಲಿತ ಕಲೆಗಳು. ಪ್ರಾಚೀನ ಕಾಲದಿಂದಲೂ ಅವುಗಳಿಗೆ ಆಸರೆಯಾಗಿರುವುದು ಇಲ್ಲಿನ ದೇಗುಲಗಳು. ವಿಶೇಷ ಪರ್ವಕಾಲಗಳಲ್ಲಿ ಸಂಗೀತ, ನೃತ್ಯ, ಯಕ್ಷಗಾನಗಳು ನಡೆಯದಿರುವ ದೈವ ಸಾನಿಧ್ಯಗಳೇ ಇಲ್ಲ ಎನ್ನಬಹುದು. ಅದರಲ್ಲೂ ಯಕ್ಷಗಾನ ತಾಳಮದ್ದಳೆ, ಪುರಾಣ ಪ್ರವಚನ ಮತ್ತು ಬಯಲಾಟಗಳು ದೇವಸ್ಥಾನಗಳಿಂದ ಆರಂಭಗೊಂಡಿವೆ’ ಎಂದು ಯಕ್ಷಗಾನ ಅರ್ಥಧಾರಿ, ಸಾಹಿತಿ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದ್ದಾರೆ.

ಹರೇಕಳ ಗ್ರಾಮದ ಸಂಪಿಗೆದಡಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ನವರಾತ್ರಿ ಉತ್ಸವದಲ್ಲಿ ಯಕ್ಷಗಾನ ತಾಳಮದ್ದಳೆ ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮುಖ್ಯ ಅತಿಥಿಯಾಗಿ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಉದ್ಯಮಿ ಜಗದೀಶ ಪೂಜಾರಿ ಇರಾ ಆಚೆಬೈಲು ಭಾಗವಹಿಸಿದ್ದರು.

ಶ್ರೀ ಅರ್ಧನಾರೀಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಮೋಹನ್‌ದಾಸ್ ರೈ ದೆಬ್ಬೇಲಿಗುತ್ತು ನೇತೃತ್ವದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಉಪಾಧ್ಯಕ್ಷ ಮಹಾಬಲ ಹೆಗ್ಡೆ ದೆಬ್ಬೇಲಿ, ಪ್ರಮುಖರಾದ ಕಡೆಂಜ ಜಗಜೀವನ್‌ದಾಸ್ ಶೆಟ್ಟಿ, ಶಾಂತಾರಾಮ ರೈ ಎಲಿಯಾರ್, ಪದ್ಮನಾಭ ಶೆಟ್ಟಿ ದೋಟ, ಭಾಸ್ಕರ ರೈ ಸಂಪಿಗೆದಡಿ ಉಪಸ್ಥಿತರಿದ್ದರು.

ತಾಳಮದ್ದಳೆಯ ಸಂಘಟಕ ಪ್ರವೀಣ್ ರೈ ಎಲಿಯಾರ್ ಸ್ವಾಗತಿಸಿದರು. ಕೆ.ಲಕ್ಷ್ಮಿನಾರಾಯಣ ರೈ ಹರೇಕಳ ವಂದಿಸಿದರು. ಹರೀಶ್ ಆಚಾರ್ಯ ಮತ್ತು ವಾಮನ್‌ರಾಜ್ ಪಾವೂರು ಸಹಕರಿಸಿದರು. ಸದಾಶಿವ ಆಚಾರ್ಯ ಹರೇಕಳ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News