ಬಜ್ಪೆ: ಯುನಿವೆಫ್ ನಿಂದ ಸೀರತ್ ಸಮಾವೇಶ
ಮಂಗಳೂರು: ಯುನಿವೆಫ್ ಕರ್ನಾಟಕವು ಸೆಪ್ಟಂಬರ್ 20ರಿಂದ ಡಿಸೆಂಬರ್ 20ರ ವರೆಗೆ 'ಮಾನವ ಸ್ವಾತಂತ್ರ್ಯ, ಕಲ್ಯಾಣ ಮತ್ತು ಪ್ರವಾದಿ ಮುಹಮ್ಮದ್ (ಸ)' ಎಂಬ ಕೇಂದ್ರೀಯ ವಿಷಯದಲ್ಲಿ ಹಮ್ಮಿಕೊಂಡಿರುವ 'ಅರಿಯಿರಿ ಮನುಕುಲದ ಪ್ರವಾದಿಯನ್ನು' ಅಭಿಯಾನದ ಪ್ರಯುಕ್ತ ಬಜ್ಪೆಯಲ್ಲಿ ಸೀರತ್ ಸಮಾವೇಶ ನಡೆಯಿತು.
ಕಾರ್ಯಕ್ರಮದಲ್ಲಿ 'ಕುಟುಂಬ ಜೀವನ ಮತ್ತು ಪ್ರವಾದಿ ಮುಹಮ್ಮದ್ (ಸ.)' ಎಂಬ ವಿಷಯದಲ್ಲಿ ಮುಖ್ಯ ಭಾಷಣ ಮಾಡಿದ ಯುನಿವೆಫ್ ಅಧ್ಯಕ್ಷ ರಫೀಉದ್ದೀನ್ ಕುದ್ರೋಳಿ, "ಪ್ರವಾದಿ ಮುಹಮ್ಮದ್ (ಸ.) ರ ಬೋಧನೆಗಳು ಸಾರ್ವಕಾಲಿಕ. 15 ಶತಮಾನಗಳ ಬಳಿಕವೂ ಅವರು ಬೋಧಿಸಿದ ಮೌಲ್ಯಗಳು ಮಾನವತೆಗೆ ಮಾರ್ಗದರ್ಶಕವಾಗಿವೆ. ಜೀವನದ ಪ್ರತಿ ಹಂತದಲ್ಲೂ ಪ್ರವಾದಿ(ಸ.)ಯ ಅನುಸರಣೆಯಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ" ಎಂದು ಹೇಳಿದರು.
ಯುನಿವೆಫ್ ಬಜ್ಪೆ ಶಾಖೆಯ ಅಧ್ಯಕ್ಷ ಅಬ್ದುರ್ರಹ್ಮಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಅತೀಖುರ್ರಹ್ಮಾನ್ ಕಿರಾಅತ್ ಪಠಿಸಿದರು. ಅಭಿಯಾನ ಸಂಚಾಲಕ ವಕಾಝ್ ಅರ್ಸಲಾನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮ ಸಂಚಾಲಕ ನೌಫಲ್ ಹಸನ್ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು.