ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಯೋಜನೆಯ ಬಗ್ಗೆ ಜಾಗೃತಿ ಮೂಡಿಸಲು ಎಸಿ ಸೂಚನೆ

Update: 2024-10-14 13:49 GMT

ಮಂಗಳೂರು,ಅ.14:ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮವು ಆರ್ಥಿಕವಾಗಿ ಹಿಂದುಳಿದವರಿಗೆ ಉಪಯೋಗಕಾರಿ ಯಾಗಿದೆ. ಹಾಗಾಗಿ ಈ ಯೋಜನೆಯ ಬಗ್ಗೆ ಜಿಲ್ಲಾದ್ಯಂತ ಜಾಗೃತಿ ಮೂಡಿಸಬೇಕು. ಜನರಿಗೆ ಸೂಕ್ತ ಮಾಹಿತಿ ನೀಡಬೇಕು ಎಂದು ಮಂಗಳೂರು ಉಪ ವಿಭಾಗಾಧಿಕಾರಿ ಆಯುಕ್ತ ಹರ್ಷವರ್ಧನ್ ತಿಳಿಸಿದ್ದಾರೆ.

ನಗರದ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಸೋಮವಾರ ನಡೆದ ಮಂಗಳೂರು ತಾಲೂಕು ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮವು ಹುಟ್ಟಿನಿಂದ ಮಕ್ಕಳಲ್ಲಿ ಕಂಡು ಬರುವ ನ್ಯೂನ್ಯತೆ ಪತ್ತೆ ಹಚ್ಚಿ ಉಚಿತ ಚಿಕಿತ್ಸೆ ಯನ್ನು ನೀಡುವ ಯೋಜನೆ ಇದಾಗಿದೆ. ಇದರಡಿ ಬರುವ ಸಿಬ್ಬಂದಿಯು ತಾಲೂಕು ವ್ಯಾಪ್ತಿಯ ಅಂಗನವಾಡಿಗಳ ಸಹಿತ ಸರಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಕಂಡು ಬರುವ 18 ವಷರ್ದದೊಳಗಿನ ನ್ಯೂನತೆಯಿರುವ ಮಕ್ಕಳನ್ನು ಗುರು ತಿಸಿ ತಜ್ಞ ವೈದ್ಯರಿಂದ ಚಿಕಿತ್ಸೆ ಕೊಡಿಸಬೇಕು ಎಂದರು.

ಗ್ರಾಪಂಗಳ ಸಮನ್ವಯದೊಂದಿಗೆ ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರ ಮಟ್ಟದಲ್ಲಿ ಒಂದು ಗ್ರಾಮವನ್ನು ತಂಬಾಕು ಮುಕ್ತ ಗ್ರಾಮ ಎಂದು ಘೋಷಿಸಬೇಕು.ಆರೋಗ್ಯ ಕ್ಷೇಮ ಕೇಂದ್ರ ಮಟ್ಟದ ಸಮುದಾಯ ಆರೋಗ್ಯ ಅಧಿಕಾರಿಗಳ ವತಿಯಿಂದ ತಂಬಾಕು ಉತ್ಪನ್ನಗಳ ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯ ಕ್ರಮ ಆಯೋಜಿಸುವ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಉಪ ವಿಭಾಗಾಧಿಕಾರಿ ಹರ್ಷವರ್ಧನ್ ಸೂಚಿಸಿದರು.

ವಲಸೆ ಕಾರ್ಮಿಕರ ಪ್ರದೇಶಗಳನ್ನು ಪತ್ತೆ ಮಾಡಿ ವಲಸೆ ಕಾರ್ಮಿಕರ ಮಕ್ಕಳಿಗೆ ಸರಿಯಾದ ಸಮಯಕ್ಕೆ ಚುಚ್ಚುಮದ್ದು ಗಳನ್ನು ನೀಡಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಸಭೆಯಲ್ಲಿ ಮಂಗಳೂರು ತಾಪಂ ಇಒ ಮಹೇಶ್ ಹೊಳ್ಳ, ತಾಲೂಕು ಆರೋಗ್ಯಾಧಿಕಾರಿ ಡಾ.ಸುಜಯ್ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News