ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

Update: 2024-10-15 05:01 GMT

ಮಂಗಳೂರು: ಪ್ರಸಕ್ತ (2024-25ನೇ) ಶೈಕ್ಷಣಿಕ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಪಿಯುಸಿ ಮತ್ತು ಪಿಯುಸಿ ಸಮಾನಾಂತರ ಕೋರ್ಸಿನ, ಸಾಮಾನ್ಯ ಪದವಿ ಮಟ್ಟದ ಕೋರ್ಸ್, ವೃತ್ತಿಪರ ಕೋರ್ಸ್ ಮತ್ತು ಸ್ನಾತಕೋತ್ತರ ಕೋರ್ಸ್ ಗಳ ವಿದ್ಯಾರ್ಥಿಗಳಿಗೆ ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶದಲ್ಲಿ ಪ್ರವೇಶಾತಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನವನ್ನು ನವೆಂಬರ್ 11ರ ವರೆಗೆ ವಿಸ್ತರಿಸಲಾಗಿದೆ.

ಎಸ್.ಎಚ್.ಪಿ. (ರಾಜ್ಯ ಹಾಸ್ಟೆಲ್ ಪೋರ್ಟಲ್ ) ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ಅರ್ಜಿಗಳನ್ನು ಸಲ್ಲಿಸುವ ವಿಧಾನ ಮತ್ತು ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ಜಾಲತಾಣ ಅನ್ನು ವೀಕ್ಷಿಸಿ ಹಾಗೂ ಹತ್ತಿರದ ಜಿಲ್ಲಾ ಮತ್ತು ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News