ಸುರತ್ಕಲ್: ಗಾಂಜಾ ಮಾರಾಟ ಮಾಡಲು ಯತ್ನ; ಆರೋಪಿ ಸೆರೆ

Update: 2024-10-17 16:41 GMT

ಸುರತ್ಕಲ್:  ಹೊಸಬೆಟ್ಟು ಬಳಿ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಓರ್ವ ಆರೋಪಿಯನ್ನು ಸುರತ್ಕಲ್‌ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಬಿಹಾರ್ ರಾಜ್ಯದ ಸೋನಿ ಕುಮಾರ್ (27) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈತನಿಂದ 30 ಸಾವಿರ ರೂ. ಮೌಲ್ಯದ ಸುಮಾರು 1.5 ಕೆಜಿಯಷ್ಟು ಗಾಂಜಾ, ಒಂದು ಮೊಬೈಲ್ ಫೋನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿಯು ಹೊಸಬೆಟ್ಟು ಬಳಿಯ ಬೀಚ್ ರಸ್ತೆಯಲ್ಲಿ ಹೆಗಲಿನಲ್ಲಿ ಬ್ಯಾಗ್ ಹಾಕಿಕೊಂಡು ನಡೆದುಕೊಂಡು ಹೋಗುತ್ತಿದ್ದ ವೇಳೆ ಪೊಲೀಸ್‌ ವಾಹನ ಕಂಡು ಓಡಲು ಯತ್ನಿಸಿದ್ದಾನೆ. ಆಗ ಪೊಲೀಸರು ಆತನನ್ನು ಬೆನ್ನಟ್ಟಿ ಹಿಡಿದು ವಿಚಾರಿಸಿದ್ದಾರೆ. ಆಗ ತನ್ನ ಬ್ಯಾಗ್‌ ನಲ್ಲಿ ಗಾಂಜಾ ಇದ್ದು, ಅದಕ್ಕಾಗಿ ಪೊಲೀಸರನ್ನು ಕಂಡಾಗ ಓಡಿ ಪರಾರಾಇಯಾಗಲು ಯತ್ನಿಸಿದ್ದಾಗಿ ತಪ್ಪು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಆರೋಪಿಯ ವಿರುದ್ಧ ಕಲಂ 8 20(b) (6), ಎನ್‌ ಡಿಪಿಎಸ್‌ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News