ಕಣಚೂರು‌ ಶಿಕ್ಷಣ ಸಂಸ್ಥೆಯಲ್ಲಿ ಶೈಕ್ಷಣಿಕ ಕಾರ್ಯಾಗಾರ

Update: 2024-10-18 14:33 GMT

ಕೊಣಾಜೆ: ದೇರಳಕಟ್ಟೆಯ ಕಣಚೂರು ಶಿಕ್ಷಣ ಸಂಸ್ಥೆ ಹಾಗೂ ಲಯನ್ಸ್ ಕ್ಲಬ್ ಮಂಗಳಗಂಗೋತ್ರಿ ಇದರ ಸಹಯೋಗ ದೊಂದಿಗೆ ಕಣಚೂರು ಪಬ್ಲಿಕ್ ಸ್ಕೂಲ್ ನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಇತ್ತೀಚೆಗೆ ನಡೆಯಿತು.

ಕಣಚೂರು ಸಮೂಹ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ರೋಹನ್ ಎಸ್.ಮೋನಿಸ್ ಅವರು ಕಾರ್ಯಕ್ರಮ ಉದ್ಘಾಟಿಸಿ, ವೃತ್ತಿ ಅವಕಾಶಗಳನ್ನು ಅನ್ವೇಷಿಸುವ ‌ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.

ನಿವೃತ್ತ ಮುಖ್ಯ ಶಿಕ್ಷಕರಾದ‌ ರವೀಂದ್ರ ರೈ ಕಲ್ಲಿಮಾರು ಅವರು ಮಾತನಾಡಿ, ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿ ಜೀವನದಲ್ಲಿ ಅತ್ಯಂತ ಮಹತ್ವದ ಕಾಲಘಟ್ಟವಾಗಿದೆ. ಈ ರೀತಿಯ ಕಾರ್ಯಾಗಾರಗಳು ವಿದ್ಯಾರ್ಥಿಗಳ ಭವಿಷ್ಯಕ್ಕೆ ದಾರಿದೀಪವಾಗುತ್ತದೆ ಎಂದರು.

ತರಬೇತುದಾರರಾದ ರೋನಾಲ್ಡ್ ಪಿಂಟೋ ಅವರು ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ನೀಡಿದರು.

ಲಯನ್ಸ್ ಕ್ಲಬ್ ಅಧ್ಯಕ್ಷ ಮಂಜುನಾಥ ಆಳ್ವ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.  ಲಯನ್ ಪ್ರಸಾದ್ ರೈ ಕಲ್ಲಿಮಾರು, ಲಿನೆಟ್ ಡಿಸೋಜಾ‌ ಮೊದಲಾದವರು ಉಪಸ್ಥಿತರಿದ್ದರು.

ಪ್ರಾಂಶುಪಾಲೆ ಕ್ಯಾರೆನ್ ಡಿಸೋಜ ಸ್ವಾಗತಿಸಿದರು. ಪ್ರಾಧ್ಯಾಪಕಿ ಸೌಮ್ಯ ಸುವರ್ಣ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News