ಗಣಿತ - ವಿಜ್ಞಾನ ಮೇಳ, ಸಂಸ್ಕೃತಿ ಮಹೋತ್ಸವ ಸ್ಪರ್ಧೆ| ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿನಿಯರು ರಾಷ್ಟ್ರಮಟ್ಟಕ್ಕೆ ಆಯ್ಕೆ

Update: 2024-10-21 13:59 GMT

ಸಾನ್ವಿ - ನಿಯತಿ ಭಟ್

ಪುತ್ತೂರು: ವಿದ್ಯಾ ಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನಮ್ ವತಿಯಿಂದ ತಲಪಾಡಿ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್‍ನಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ 24ನೇ ಪ್ರಾಂತೀಯ ಗಣಿತ - ವಿಜ್ಞಾನ ಮೇಳ ಮತ್ತು ಸಂಸ್ಕೃತಿ ಮಹೋತ್ಸವ ಸ್ಪರ್ಧೆಯಲ್ಲಿ ನಗರದ ಬಪ್ಪಳಿಗೆಯ ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದ ವಿದ್ಯಾರ್ಥಿನಿಯರಾದ ಸಾನ್ವಿ ಜಿ ಮತ್ತು ನಿಯತಿ ಭಟ್ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದ ಎಂಟನೇ ತರಗತಿಯ ವಿದ್ಯಾರ್ಥಿನಿ ಸಾನ್ವಿ ಜಿ ಬಾಲವರ್ಗದ ಗಣಿತ ವಸ್ತು ಪ್ರದರ್ಶನ ದಲ್ಲಿ ಕ್ಷೇತ್ರ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ಅವರು ಬಂಟ್ವಾಳ ತಾಲೂಕಿನ ಗಿರೀಶ್ ಗೌಡ ಎಚ್ ಮತ್ತು ಸುಮಿತ್ರ ದಂಪತಿಗಳ ಪುತ್ರಿ.

ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದ 10ನೇ ತರಗತಿಯ ವಿದ್ಯಾರ್ಥಿನಿ ನಿಯತಿ ಭಟ್ ಅವರು ಕಿಶೋರ ವರ್ಗದ ಪ್ರಾಂತೀಯ ವಿಜ್ಞಾನ ಪ್ರಯೋಗ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಅವರು ಪುತ್ತೂರು ತಾಲೂಕಿನ ಮುಕ್ರಂ ಪಾಡಿ ಪ್ರವೀಣ್ ದೊಡ್ಡಮಾಣಿ ಮತ್ತು ಚಿತ್ಕಲ ಗೌರಿ ಕೆ ದಂಪತಿಗಳ ಪುತ್ರಿ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News