ಉಳ್ಳಾಲದಲ್ಲಿ ರೈಲ್ವೆ ಹಳಿ ಮೇಲೆ ಕಲ್ಲಿಟ್ಟ ಪ್ರಕರಣ: ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಸಂಸದ ಚೌಟ ಆಗ್ರಹ

Update: 2024-10-21 14:04 GMT

ಮಂಗಳೂರು: ಮಂಗಳೂರು-ಕೇರಳ ಮಾರ್ಗವಾದ ಉಳ್ಳಾಲದ ತೊಕ್ಕೊಟ್ಟು ರೈಲ್ವೆ ಓವರ್ ಬ್ರಿಡ್ಜ್ ಹಳಿ ಮೇಲೆ ಕಲ್ಲುಗಳನ್ನು ಇಟ್ಟು ಅಪಾಯಕಾರಿ ಕೃತ್ಯವೆಸಗಿರುವುದು ಗಂಭೀರ ವಿಚಾರವಾಗಿದ್ದು, ಪೊಲೀಸರು ಕೂಡಲೇ ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಆಗ್ರಹಿಸಿದ್ದಾರೆ.

ಮಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮಕ್ಕೆ ಹೇಳಿಕೆ ನೀಡಿರುವ ಕ್ಯಾ. ಚೌಟ ಅವರು, ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟು ವಿಕೃತಿ ಮೆರೆದಿರುವ ಈ ಕೃತ್ಯದ ಬಗ್ಗೆ ಈಗಾಗಲೇ ನಾನು ಸಂಬಂಧಪಟ್ಟ ಪೊಲೀಸರು ಹಾಗೂ ರೈಲ್ವೆ ಇಲಾಖೆ ರಕ್ಷಣಾ ಪಡೆ (ಆರ್‌ಪಿಎಫ್) ಅಧಿಕಾರಿಗಳ ಜತೆ ಮಾತನಾಡಿದ್ದೇನೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಬಾರಿಗೆ ಈ ರೀತಿಯ ಘಟನೆ ನಡೆಯುತ್ತಿದೆ. ರೈಲ್ವೆ ಹಳಿಯನ್ನು ಹಾನಿಗೊಳಿಸುವುದಕ್ಕೆ ಪ್ರಯತ್ನಿಸಿರುವುದು ದೇಶದ್ರೋಹದ ಕೆಲಸವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News