ಬಿಜೆಪಿ ಸಕ್ರಿಯ ಸದಸ್ಯತ್ವ ಅಭಿಯಾನದಲ್ಲಿ ಸಂಸದ ಚೌಟರಿಂದ ಸದಸ್ಯತ್ವ ಮರು ನೋಂದಣಿ

Update: 2024-10-23 14:23 GMT

ಮಂಗಳೂರು: ಸಕ್ರಿಯ ಸದಸ್ಯತ್ವ ಅಭಿಯಾನದ ಭಾಗವಾಗಿ ಬಿಜೆಪಿಯ ಸಕ್ರಿಯ ಸದಸ್ಯನಾಗಿ ಸಂಸದ ಬ್ರಿಜೇಶ್ ಚೌಟ ತನ್ನ ಸದಸ್ಯತ್ವವನ್ನು ಬುಧವಾರ ಮರು ನೋಂದಣಿ ಮಾಡಿಸಿಕೊಂಡಿದ್ದಾರೆ.

ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸಕ್ರಿಯ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರ ಸಮ್ಮುಖದಲ್ಲಿ ಬ್ರಿಜೇಶ್ ಚೌಟ ಸಕ್ರಿಯ ಸದಸ್ಯನಾಗಿ ನೋಂದಣಿ ಮಾಡಿಕೊಂಡರು.

ಈ ವೇಳೆ ಮಾತನಾಡಿದ ಬ್ರಿಜೇಶ್ ಚೌಟ ಪ್ರಧಾನಿ ನರೇಂದ್ರ ಮೋದಿ ಸಕ್ರಿಯ ಸದಸ್ಯತಾ ಅಭಿಯಾನವನ್ನು ಪ್ರಾರಂಭಿಸುವ ಮೂಲಕ ಬಿಜೆಪಿಯ ಮೊದಲ ಸಕ್ರಿಯ ಸದಸ್ಯರಾಗಿ ತಮ್ಮ ಸದಸ್ಯತ್ವವನ್ನು ಮರು ನೋಂದಣಿ ಮಾಡಿಸಿಕೊಂಡಿದ್ದಾರೆ. ಪಕ್ಷವನ್ನು ತಳಮಟ್ಟದಲ್ಲಿ ಮತ್ತಷ್ಟು ಬಲಪಡಿಸಲು ಹಾಗೂ ಪ್ರಧಾನಿ ನರೇಂದ್ರ ಮೋದಿಯ ವಿಕಸಿತ ಭಾರತದ ಪರಿಕಲ್ಪನೆಗೆ ವೇಗ ನೀಡುವ ನಿಟ್ಟಿನಲ್ಲಿ ಈ ಅಭಿಯಾನ ಬಹಳ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ ಎಂದರು.

ಸಂಘಟನಾ ಪರ್ವದ ರಾಜ್ಯ ಚುನಾವಣಾಧಿಕಾರಿ ಗಣೇಶ್ ಕಾರ್ಣಿಕ್, ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್, ಶಾಸಕರಾದ ವೇದವ್ಯಾಸ ಕಾಮತ್, ವೈ. ಭರತ್ ಶೆಟ್ಟಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News