ಸಿಸಿಬಿ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಕೊಲೆ ಪ್ರಕರಣದ ಆರೋಪಿ ಸೆರೆ

Update: 2024-10-24 16:54 GMT

ಸುರತ್ಕಲ್‌: ಪತ್ಯೇಕ ಎರಡು ಪ್ರಕರಣಗಳಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಸುರತ್ಕಲ್‌ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಕೇರಳ ಮೂಲದ ಜೋಸ್ ಕುಟ್ಟಿ ಎಂದು ತಿಳಿದು ಬಂದಿದೆ. ಈನನೊಂದಿಗೆ ಕೃತ್ಯದಲ್ಲಿ ಭಾಗಿಯಾಗಿದ್ದ ಇನ್ನೋರ್ವ ಆರೋಪಿ ಕೇರಳದ ಅಚ್ಚನ್ ಕುಂಞ ಎಂಬಾತ 8 ವರ್ಷಗಳ ಹಿಂದೆ ಮೃತಪಟ್ಟಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸುಮಾರು 30 ವರ್ಷಗಳ ಹಿಂದೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳ ಗ್ರಾಮದಲ್ಲಿ ಎಂಆರ್ ಪಿಎಲ್ ಟೌನ್ ಶಿಪ್ ಸೈಟ್ ಪರಿಸರದಲ್ಲಿ ಅಲ್ಲಿನ ಸೆಕ್ಯೂರಿಟಿ ಗಾರ್ಡ್‌ ಆಗಿ ದುಡಿಯುತ್ತಿದ್ದ ನಾರಾಯಣ ಅವರಿಗೆ ಹಲ್ಲೆ ಮಾಡಿ ಕೊಲೆಗೈದಿ ದ್ದರು. ಅಲ್ಲದೆ, ಎಂ ಆರ್ ಪಿ ಎಲ್ ಸೈಟ್ ನಲ್ಲಿರುವ ಕ್ಯಾಂಟೀನ್ ಬಳಿ ಮಲಗಿದ್ದ ಕೂಲಿ ಕೆಲಸದವರ ಜೊತೆ ಗಲಾಟೆ ಮಾಡುತ್ತಿದ್ದ ವೇಳೆ ಬಿಡಿಸಲು ಬಂದಿದ್ದ ಆರೋಪಿಗಳ ಭಾವ ತೋಮಸ್ ಎಂಬವರಿಗೆ ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿದ್ದರು.

ಈ ಎರಡೂ ಪ್ರಕರಣಗಳಲ್ಲಿ ಭಾಗಿಯಾಗಿ ಬಂಧನಕ್ಕೊಳಗಾಗದೇ ತಲೆ ಮರೆಸಿಕೊಂಡಿದ್ದ ಆರೋಪಿಗಳು ಕೇರಳ, ಗುಜರಾತ್, ರಾಜಸ್ಥಾನ, ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದರು. ಇವರ ವಿರುದ್ಧ ಎಲ್ ಪಿ ಸಿ ವಾರಂಟ್ ಜ್ಯಾರಿಯಲ್ಲಿತ್ತು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಜೋಸ್ ಕುಟ್ಟಿ ಪಾಪಚ್ಚನ್ ನನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್, ಪೊಲೀಸ್ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಎಚ್.ಎಂ., ಎಎಸ್ಐ ಮೋಹನ್ ಕೆ.ವಿ. ಹಾಗೂ ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು. 30 ವರ್ಷಗಳ ಹಳೆಯ ಪ್ರಕರಣದ ಆರೋಪಿ ಜೋಸ್ ಕುಟ್ಟಿಯನ್ನು ಪತ್ತೆ ಹಚ್ಚಿದ ಸಿಸಿಬಿ ಪೊಲೀಸರ ಕಾರ್ಯವನ್ನು ನಗರ ಪೊಲೀಸ್ ಆಯುಕ್ತರಾದ ಅನುಮಪ್ ಅಗ್ರವಾಲ್ ಅವರು ಶ್ಲಾಫಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News