ಹಸಿರು ಪಟಾಕಿ ಬಳಕೆಗೆ ಸೂಚನೆ

Update: 2024-10-25 13:23 GMT

ಮಂಗಳೂರು: ದೀಪಾವಳಿ ಹಬ್ಬದ ಸಂದರ್ಭ ಪಟಾಕಿ ಮತ್ತು ಸಿಡಿಮದ್ದುಗಳನ್ನು ಉಪಯೋಗಿಸದೆ ಶಬ್ದ ಮಾಲಿನ್ಯ ಕಡಿಮೆ ಮಾಡುವ ಸಲುವಾಗಿ ಹಸಿರು ಪಟಾಕಿಗಳನ್ನು ಬಳಸುವಂತೆ ಪರಿಸರ ಇಲಾಖಾಧಿಕಾರಿಗಳು ಮನವಿ ಮಾಡಿದ್ದಾರೆ.

ಹಸಿರು ಪಟಾಕಿ ಹೊರತುಪಡಿಸಿ ಇತರ ಎಲ್ಲಾ ಪಟಾಕಿಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹಬ್ಬದ ಅವಧಿಯು ಸಂಜೆ 6ರಿಂದ ರಾತ್ರಿ 10ಗಂಟೆಯವರೆಗೆ ಮಾತ್ರ ಹಸಿರು ಪಟಾಕಿ ಮತ್ತು ಸಿಡಿಮದ್ದುಗಳನ್ನು ಸಿಡಿಸುವುದಕ್ಕೆ ಒಪ್ಪಿಗೆ ನೀಡಲಾಗಿದೆ. ಆಚರಣೆಯ ವೇಳ ಯಾವುದೇ ಪ್ರಾಣಿ-ಪಕ್ಷಿಗಳು ಮಕ್ಕಳು ಹಾಗೂ ವೃದ್ಧರಿಗೆ ತೊಂದರೆ ಆಗದಂತೆ ಪಟಾಕಿಗಳನ್ನು ಬಳಸಬೇಕು. ಉಳಿದ ಸಮಯದಲ್ಲಿ ಪಟಾಕಿ, ಸಿಡಿಮದ್ದುಗಳನ್ನು ಸಿಡಿಸುವುದನ್ನು ನಿಷೇಧಿಸಲಾಗಿದೆ ಎಂದು ಕರ್ನಾಟಕ ಪರಿಸರ ಅಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News