ಕೋಮು ದ್ವೇಷಕ್ಕೆ ಪ್ರಚೋದನೆ ಆರೋಪ| ಶಾಸಕರ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಮನವಿ

Update: 2024-10-25 16:17 GMT

ಮಂಗಳೂರು: ವಕ್ಫ್ ಕಾಯ್ದೆ ತಿದ್ದುಪಡಿಗೆ ಸಂಬಂಧಿಸಿದಂತೆ ಕೋಮುದ್ವೇಷಕ್ಕೆ ಪ್ರಚೋದನೆ ನೀಡಿದ ಆರೋಪದಲ್ಲಿ ಶಾಸಕರಾದ ಬಸವನಗೌಡ ಪಾಟೀಲ್ ಯತ್ನಾಳ್, ಸಿ.ಟಿ. ರವಿ ಮತ್ತು ಭಾಷಣಗಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತದ ಘಟಕವು ಮಂಗಳೂರು ನಗರ ಪೊಲೀಸ್ ಆಯುಕ್ತರನ್ನು ಶುಕ್ರವಾರ ಭೇಟಿ ಮಾಡಿ ಮನವಿ ಸಲ್ಲಿಸಿದೆ.

ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಕಾಂಗ್ರೆಸ್ ಅಲ್ಪಸಂಖ್ಯಾತದ ಘಟಕದ ದ.ಕ.ಜಿಲ್ಲಾಧ್ಯಕ್ಷ ಕೆ.ಕೆ.ಶಾಹುಲ್ ಹಮೀದ್ ಪ್ರಚೋದನಕಾರಿ ಹೇಳಿಕೆ ನೀಡುವ ಬಸವನಗೌಡ ಪಾಟೀಲ್ ಯತ್ನಾಳ್ ಮತ್ತು ಸಿಟಿ ರವಿ ಶಾಸಕರಾಗಿ ಮುಂದುವರಿಯಲು ಅನರ್ಹರು. ಅವರ ವಿರುದ್ಧ ಕ್ರಮ ಜರುಗಿಸದೇ ಇದ್ದರೆ ಅಪಾಯ ಎದುರಾಗಬಹುದು. ಅವರ ಶಾಸಕ ಸ್ಥಾನವನ್ನು ರದ್ದುಗೊಳಿ ಸಬೇಕು. ಅದಲ್ಲದೆ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭ ಪಕ್ಷದ ಮುಖಂಡರಾದ ಆಲ್ವಿನ್ ಡಿಸೋಜ, ಮುಹಮ್ಮದ್ ಬಪ್ಪಲಿಗೆ, ಆಲ್ವಿನ್ ಪ್ರಕಾಶ್, ಥಾಮಸ್, ಚೆರಿಯನ್, ಹಬೀಬ್ ಕಣ್ಣೂರ್, ಇಮ್ರಾನ್ ಎ.ಆರ್ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News