ಕಲ್ಲಡ್ಕ ವಲಯ ಮಟ್ಟದ ಪ್ರಾಥಮಿಕ-ಪ್ರೌಢಶಾಲಾ ಕ್ರೀಡಾಕೂಟ: ಮಾಣಿ ಬಾಲವಿಕಾಸ ಶಾಲೆಗೆ ಅವಳಿ ಸಮಗ್ರ ಪ್ರಶಸ್ತಿ

Update: 2024-10-29 04:47 GMT

ಬಂಟ್ವಾಳ: ದ.ಕ. ಜಿಪಂ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಬಂಟ್ವಾಳ ಮತ್ತು ಪೆರ್ನೆ ಶ್ರೀ ರಾಮಚಂದ್ರ ವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಪೆರ್ನೆಯಲ್ಲಿ ನಡೆದ 14 ಮತ್ತು 17 ವರ್ಷದ ವಯೋಮಿತಿಯೊಳಗಿನ ಬಾಲಕ ಮತ್ತು ಬಾಲಕಿಯರ ಕಲ್ಲಡ್ಕ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಮಾಣಿ ಬಾಲವಿಕಾಸ ಶಾಲೆ ಅವಳಿ ಸಮಗ್ರ ಪ್ರಶಸ್ತಿಗಳನ್ನು ಗಳಿಸಿದೆ.

ಸ್ಪರ್ಧೆಯಲ್ಲಿ ಮಾಣಿಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಒಟ್ಟು 55 ಬಹುಮಾನಗಳನ್ನು ಪಡೆದುಕೊಂಡಿದ್ದು, 22 ಪ್ರಥಮ, 22 ದ್ವಿತೀಯ, 11 ತೃತೀಯ ಸ್ಥಾನಗಳನ್ನು ಗಳಿಸಿವೆ. 17ರ ವಯೋಮಾನದ ಪ್ರೌಢಶಾಲಾ ವಿಭಾಗದ ಬಾಲಕಿಯರ ಹಾಗೂ 14ರ ವಯೋಮಾನದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ತಂಡಗಳು ಸಮಗ್ರ ಚಾಂಪಿಯನ್ ಶಿಪ್ ಗೆದ್ದುಕೊಂಡಿದೆ.

17ರ ವಯೋಮಾನದ ಬಾಲಕರ ತಂಡವು ದ್ವಿತೀಯ ಸಮಗ್ರ ಪ್ರಶಸ್ತಿಗೆ ಭಾಜನವಾಗಿದೆ.

ಪ್ರಾಥಮಿಕ ವಿಭಾಗದಲ್ಲಿ 7ನೇ ತರಗತಿಯ ಮುಹಮ್ಮದ್ ಫೌಝನ್, 14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ 8ನೇ ತರಗತಿಯ ಕೃತಿ ಎನ್.ಪಿ. ಹಾಗೂ 17ರ ವಯೋಮಾನದ ಬಾಲಕರ ವಿಭಾಗದಲ್ಲಿ 10ನೇ ತರಗತಿಯ ಶುಭಂ ಶೆಟ್ಟಿ ವೈಯಕ್ತಿಕ ಚಾಂಪಿಯನ್ ಶಿಪ್ ಗಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News