ಸಂತ್ರಸ್ಥ ಮಕ್ಕಳಿಗೆ ಸೇವೆ: ಅರ್ಜಿ ಆಹ್ವಾನ
ಮಂಗಳೂರು: ಸಂತ್ರಸ್ಥ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಿಗಾಗಿ ಸೇವೆ ಸಲ್ಲಿಸಲು 2012ರ ಪೊಕ್ಸೊ ಕಾಯ್ದೆಯಡಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಸಾಮಾಜಿಕ ಕಾರ್ಯ ಅಥವಾ ಮನೋವಿಜ್ಞಾನ ಅಥವಾ ಮಕ್ಕಳ ಅಭಿವೃದ್ಧಿಯಲ್ಲಿ ಸ್ನಾತಕೋತ್ತರ ಪದವಿ ಅಥವಾ ಮಕ್ಕಳ ಶಿಕ್ಷಣ, ಅಭಿವೃದ್ಧಿ, ರಕ್ಷಣೆ ವಿಷಯದಲ್ಲಿ ಕನಿಷ್ಟ 3 ವರ್ಷ ಅನುಭವವುಳ್ಳ ಪದವಿ ಹೊಂದಿರಬೇಕು. ಮಕ್ಕಳ ಹಕ್ಕುಗಳು ಅಥವಾ ಮಕ್ಕಳ ರಕ್ಷಣೆ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಸಂಸ್ಥೆಗಳು ಹಾಗೂ ಮಕ್ಕಳ ಪಾನಾ ಸಂಸ್ಥೆಯ ಅಧಿಕಾರಿಗಳೂ ಅರ್ಜಿ ಸಲ್ಲಿಸಬಹುದು.
ಪ್ರತಿ ಪ್ರಕರಣಕ್ಕೆ 3,000 ರೂ. ಸಂಭಾವನೆ ನಿಗದಿಗೊಳಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಕ್ಷೇತ್ರ ಕಾರ್ಯವನ್ನು ಮಾಡಲು ಮತ್ತು ಅಪರಾಧ ನ್ಯಾಯ ವ್ಯವಸ್ಥೆಯ ಮೂಲಕ ಮಕ್ಕಳು ಮತ್ತವರ ಕುಟುಂಬಗಳಿಗೆ ಸಹಾಯ ಮಾಡಲು ತರಬೇತಿ ನೀಡಲಾಗುತ್ತದೆ. ಅರ್ಜಿ ನಮೂನೆಯನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕಚೇರಿಯಿಂದ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ನ.6ರಿಂದ 21ರೊಳಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾಧಿಕಾರಿಯವರ ಕಚೇರಿ ಸಂಕೀರ್ಣ, 1ನೇ ಮಹಡಿ, ದ.ಕ. ಜಿಲ್ಲೆ, ಮಂಗಳೂರು - 575001 ವಿಳಾಸಕ್ಕೆ ಕಳುಹಿಸಬೇಕು.
ಹೆಚ್ಚಿನ ಮಾಹಿತಿಗೆ ದೂ.ಸಂ: 0824-2440004ಕ್ಕೆ ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ರಕ್ಷಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.