ಅಲ್ಪಸಂಖ್ಯಾತ ವಿದ್ಯಾರ್ಥಿವೇತನ: ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ
ಮಂಗಳೂರು: ಪ್ರಸಕ್ತ (2024-25ನೇ ಸಾಲಿನ) ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ವಿವಿಧ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ನವೆಂಬರ್ 30ರವರೆಗೆ ಅವಧಿ ವಿಸ್ತರಿಸಲಾಗಿದೆ.
ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ 1ನೇ ತರಗತಿಯಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ ಓದುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾರ್ಥಿವೇತನ (ನ್ಯಾಷನಲ್ ಓವರ್‌ಸೀಸ್ ಸ್ಕಾಲರ್ ಶಿಪ್)ಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು, ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆ ಗಳಲ್ಲಿ ಪ್ರವೇಶ ಪಡೆದ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಕೋರ್ಸ್ ಅವಧಿಯಲ್ಲಿ ಒಂದು ಬಾರಿಗೆ 2 ಲಕ್ಷ ರೂ. ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸಲು, ಎಂಫಿಲ್ ಮತ್ತು ಪಿಎಚ್‌ಡಿಗೆ ಪೂರ್ಣಕಾಲಿಕ ನೋಂದಣಿಯಾಗಿ ವ್ಯಾಸಂಗ ಮಾಡುತ್ತಿರುವ ಅರ್ಹ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಫೆಲೋಶಿಷ್‌ಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಿಸಲಾಗಿದೆ.
ವಿದ್ಯಾರ್ಥಿವೇತನದ ಹಾಗೂ ಪ್ರೋತ್ಸಾಹಧನದ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲಾಖೆಯ ವೆಬ್‌ಸೈಟ್ ವಿಳಾಸ