ಮಂಗಳೂರು ಕಂಬಳ ಸಮಿತಿಯ ಸಭೆ

Update: 2024-11-05 13:44 GMT

ಮಂಗಳೂರು: ಸಂಸದ ಬ್ರಿಜೇಶ್ ಚೌಟ ಸಾರಥ್ಯದಲ್ಲಿ 8ನೇ ವರ್ಷದ ಮಂಗಳೂರು ಕಂಬಳವು ಡಿ.28ರಂದು ಕೂಳೂರಿನ ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡುಕರೆಯಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಕಂಬಳದ ಪೂರ್ವಭಾವಿ ಸಭೆಯು ಮಂಗಳವಾರ ನಗರದ ಪತ್ತುಮುಡಿ ಸೌಧದಲ್ಲಿ ನಡೆಯಿತು.

ಮಂಗಳೂರು ಕಂಬಳ ಸಮಿತಿಯ ಅಧ್ಯಕ್ಷ ಹಾಗೂ ಸಂಸದ ಕ್ಯಾ.ಬ್ರಿಜೇಶ್ ಚೌಟ ಸಭೆಯನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು 7 ವರ್ಷಗಳಿಂದ ಯಶಸ್ವಿಯಾಗಿ ನಡೆದುಕೊಂಡು ಬರುತ್ತಿರುವ ಮಂಗಳೂರು ಕಂಬಳಕ್ಕೆ ಉತ್ತಮ ಜನಮನ್ನಣೆ ಸಿಗುತಿದೆ. ಇದು ಕರಾವಳಿಯ ಪ್ರವಾಸೋಧ್ಯಮಕ್ಕೆ ಮೈಲುಗಲ್ಲಾಗಲಿದೆ. ಕಂಬಳವನ್ನು ಮುಂದಿನ ತಲೆ ಮಾರುಗಳಿಗೆ ಉಳಿಸುವ ಉದ್ದೇಶದಿಂದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು.

ಕಂಬಳಕ್ಕೆ ಹೊಸ ಮೆರುಗನ್ನು ನೀಡುವ ದೃಷ್ಟಿಯಿಂದ ಕರಾವಳಿಯ ಸಂಸ್ಕೃತಿಯನ್ನು ಸಾರುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಬ್ರಿಜೇಶ್ ಚೌಟ ಹೇಳಿದರು.

ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ, ಜಿಲ್ಲಾ ಕಂಬಳ ಸಮಿತಿಯ ವಿಜಯಕುಮಾರ್ ಕಂಗಿನಮನೆ ಮಾತನಾಡಿದರು. ಸಭೆಯಲ್ಲಿ ಜಿಲ್ಲಾ ಕಂಬಳ ಸಮಿತಿಯ ಪಿ.ಆರ್. ಶೆಟ್ಟಿ, ಸುಧಾಕರ ಶೆಟ್ಟಿ ಮುಗರೋಡಿ, ಕಂಬಳ ಸಮಿತಿ ಉಪಾಧ್ಯಕ್ಷರಾದ ಕಿರಣ್ ಕುಮಾರ್, ಅನಿಲ್ ಕುಮಾರ್, ಮಂಗಳೂರು ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುಜಿತ್ ಪ್ರತಾಪ್ ಮಂಗಲ್ಪಾಡಿ, ಕಂಬಳ ಸಮಿತಿಯ ಕೋಶಾಧಿಕಾರಿ ಪ್ರೀತಮ್ ರೈ ಉಪಸ್ಥಿತರಿದ್ದರು.

ಸಂಚಾಲಕ ಸಚಿನ್ ಶೆಟ್ಟಿ ಸಾಂತ್ಯ ಸ್ವಾಗತಿಸಿದರು. ಉಪಾಧ್ಯಕ್ಷ ಪ್ರಕಾಶ್ ಪೂಜಾರಿ ಗರೋಡಿ ವಂದಿಸಿದರು. ಕಾರ್ಯದರ್ಶಿ ಮನ್ಮತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News