ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾನೂನು ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ

Update: 2024-11-05 16:21 GMT

ಮಂಗಳೂರು: ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾನೂನು ಸಲಹೆಗಾರರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾಧಿಕಾರಿಗಳ ಕಚೇರಿಗೆ ಸಂಬಂಧಿಸಿದ ಭೂಕಂದಾಯ/ಭೂ ಮಂಜೂರಾತಿ ನಿಯಮ /ಭೂಸುಧಾರಣಾ/ ಭೂಸ್ವಾಧೀನಕಾಯ್ದೆ / ನಿಯಮ ಇನ್ನಿತರ ಕಾಯ್ದೆ /ನಿಯಮಗಳ ಪ್ರಕರಣಗಳಿಗೆ ಹಾಗೂ ಯಾವುದೇ ನ್ಯಾಯಾಲಯ ವ್ಯಾಜ್ಯಗಳ ಬಗ್ಗೆ ಕಾನೂನು ಸಲಹೆ ನೀಡುವುದು ಕಾನೂನು ಸಲಹೆಗಾರರ ಕರ್ತವ್ಯವಾಗಿದೆ.

ನಿವೃತ್ತ ನ್ಯಾಯಾಧೀಶರು/ನಿವೃತ್ತ ಕಂದಾಯ ಇಲಾಖೆಯ ಅಧಿಕಾರಿ (ನಿವೃತ್ತ ವಿಶೇಷ ಜಿಲ್ಲಾಧಿಕಾರಿ) ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ಕಡ್ಡಾಯವಾಗಿ ಪಾಲಿಸುವ ಷರತ್ತಿಗೊಳಪಟ್ಟು 70,000 ರೂ. ಮತ್ತು ನಿವೃತ್ತ ಕಂದಾಯ ಇಲಾಖೆಯ ನೌಕರರಿಗೆ (ನಿವೃತ್ತ ತಹಶೀಲ್ದಾರ್/ ಉಪ ತಹಶೀಲ್ದಾರ್) 40,000 ರೂ.ಮಾಸಿಕ ಸಂಚಿತ ವೇತನ ನಿಗದಿಗೊಳಿಸಲಾಗಿದೆ.

ಜಿಲ್ಲಾಧಿಕಾರಿಯ ಕಾನೂನು ಸಲಹೆಗಾರರಾಗಿ ನೇಮಕ ಹೊಂದಲು ಇಚ್ಛಿಸುವವರು ಸ್ವವಿವರ ಮತ್ತು ದಾಖಲೆಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ನ.19ರೊಳಗೆ ಅರ್ಜಿ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗೆ ಜಿಲ್ಲಾಧಿಕಾರಿ ಕಚೇರಿಯ ಆಡಳಿತ ಶಾಖೆ ಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಕಚೇರಿಯ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News