ಮಂಗಳೂರು: ಮಾಜಿ ಮೇಯರ್ ಅಜಿತ್ ಕುಮಾರ್ ನಿಧನ

Update: 2024-11-06 14:45 GMT

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್, ನಗರದ ಎಯ್ಯಾಡಿ ನಿವಾಸಿ ಅಜಿತ್ ಕುಮಾರ್ (73) ಸೋಮವಾರ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಬಂಧುಬಳಗವನ್ನು ಮೃತರು ಅಗಲಿದ್ದಾರೆ.

ಸಿವಿಲ್ ಇಂಜಿನಿಯರ್ ಆಗಿದ್ದ ಅಜಿತ್ ಕುಮಾರ್ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತರಾಗಿದ್ದರು. ಜಿಲ್ಲೆಯಲ್ಲಿ ನಡೆದ ಹಲವಾರು ಚುನಾವಣೆಗಳಲ್ಲಿ ತೊಡಗಿಸಿಕೊಂಡಿದ್ದ ಅವರು ಪಕ್ಷದ ಹಿರಿಯ ಮುಖಂಡರ ಜೊತೆ ನಿಕಟ ಸಂಪರ್ಕ ಹೊಂದಿದ್ದರು. 1987-88ನೇ ಸಾಲಿನಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಆಗಿದ್ದರು.

*ಅಜಿತ್ ಕುಮಾರ್‌ರ ನಿಧನಕ್ಕೆ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ತೀವ್ರ ಸಂತಾಪ ಸೂಚಿಸಿದೆ. ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ, ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಮಾಜಿ ರಾಜ್ಯಸಭಾ ಸದಸ್ಯ ಬಿ.ಇಬ್ರಾಹೀಂ, ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ಗಂಗಾಧರ್ ಗೌಡ, ಶಾಸಕರಾದ ಅಶೋಕ್ ಕುಮಾರ್ ರೈ, ಐವನ್ ಡಿಸೋಜ, ಮಾಜಿ ಶಾಸಕರಾದ ವಿಜಯ ಕುಮಾರ್ ಶೆಟ್ಟಿ, ಎನ್.ಎಂ. ಅಡ್ಯಂತಾಯ, ಮುಹಮ್ಮದ್ ಮಸೂದ್, ಶಕುಂತಲಾ ಶೆಟ್ಟಿ, ಜೆ.ಆರ್. ಲೋಬೊ, ಎಐಸಿಸಿ ಕಾರ್ಯದರ್ಶಿ ಪಿ.ವಿ.ಮೋಹನ್, ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ, ಕೆಪಿಸಿಸಿ ಪದಾಧಿಕಾರಿಗಳಾದ ಎಂ.ಎಸ್. ಮುಹಮ್ಮದ್, ಜಿ.ಎ.ಬಾವಾ, ಮಿಥುನ್ ರೈ, ರಕ್ಷಿತ್ ಶಿವರಾಂ, ಜಿ.ಕೃಷ್ಣಪ್ಪ, ಇನಾಯತ್ ಅಲಿ, ಟಿ.ಎಂ.ಶಹೀದ್, ಲಾವಣ್ಯ ಬಳ್ಳಾಲ್, ಮುಖಂಡರಾದ ಬಿ.ಎಚ್.ಖಾದರ್, ಶಶಿಧರ್ ಹೆಗ್ಡೆ, ಯು.ಕೆ.ಮೋನು, ಸುರೇಶ್ ಬಳ್ಳಾಲ್, ಇಬ್ರಾಹೀಂ ಕೋಡಿಜಾಲ್, ಸದಾಶಿವ್ ಉಳ್ಳಾಲ್, ಕೆ.ಅಶ್ರಫ್, ಮಹಾಬಲ ಮಾರ್ಲ, ಮಮತಾ ಗಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಬ್ದುಲ್ ಸಲೀಂ, ಪ್ರಕಾಶ್ ಸಾಲ್ಯಾನ್, ಮನಪಾ ಸದಸ್ಯರಾದ ಪ್ರವೀಣ್‌ಚಂದ್ರ ಆಳ್ವ, ಲ್ಯಾನ್ಸ್ ಲಾಟ್ ಪಿಂಟೊ, ಭಾಸ್ಕರ್ ಕೆ, ಅಬ್ದುಲ್ ರವೂಫ್, ಕೇಶವ ಮರೋಳಿ, ನವೀನ್ ಡಿಸೋಜ, ಎ.ಸಿ.ವಿನಯರಾಜ್, ಜೆಸಿಂತಾ, ಸಂಶುದ್ದೀನ್ ಕುದ್ರೋಳಿ, ಲತೀಫ್ ಕಂದಕ್, ಅಶ್ರಫ್ ಬಜಾಲ್, ಅನಿಲ್ ಕುಮಾರ್, ಝೀನತ್ ಸಂಶುದ್ದೀನ್ ಬಂದರ್, ಸತೀಶ್ ಪೆಂಗಲ್, ಹೇಮಂತ್ ಗರೋಡಿ, ಚೇತನ್ ಕುಮಾರ್, ತನ್ವೀರ್ ಶಾ, ಕಿಶೋರ್ ಶೆಟ್ಟಿ ಸಂತಾಪ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News