ಪುತ್ತೂರು: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Update: 2024-11-07 14:38 GMT

ಪುತ್ತೂರು: ನಗರದಲ್ಲಿ ನಡೆದ ಕಳವು ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿ ಕೊಂಡಿದ್ದ ಆರೋಪಿಯನ್ನು ಬಂಧಿಸಿರುವ ಪುತ್ತೂರು ನಗರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಕೇರಳದ ಕೊಳ್ಳಂ ನಿವಾಸಿ ಇಟ್ಟಿ ಪಣಿಕರ್ ಬಂಧಿತ ಆರೋಪಿ. ಈತ ಕಳೆದ 2 ವರ್ಷದ ಹಿಂದೆ ಪುತ್ತೂರು ನಗರದ ದರ್ಬೆ ಯಲ್ಲಿರುವ ಹಿತ ಆಸ್ಪತ್ರೆಯಿಂದ ಜನರೇಟರ್ ಬ್ಯಾಟರಿ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ. ಇಟ್ಟಿ ಪಣಿಕರ್ 2022ರ ಸೆಪ್ಟೆಂಬರ್ ತಿಂಗಳಲ್ಲಿ ಹಿತ ಆಸ್ಪತ್ರೆಯ ಜನರೇಟರ್‍ನ ಬ್ಯಾಟರಿ ಕಳವು ಮಾಡಿದ್ದು, ಈ ಬಗ್ಗೆ ಕೇಸು ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಆ ಸಂದರ್ಭ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಆರೋಪಿಗೆ ಜಾಮೀನು ಮಂಜೂರು ಮಾಡಿತ್ತು. ಬಳಿಕ ಆರೋಪಿ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿ ಕೊಂಡಿದ್ದ. ಬಳಿಕ ನ್ಯಾಯಾಲಯ ಆರೋಪಿ ವಿರುದ್ಧ ವಾರಂಟ್ ಜಾರಿ ಮಾಡಿತ್ತು.

ಕೇಸು ತನಿಖೆ ಕೈಗೆತ್ತಿಕೊಂಡ ಪೊಲೀಸರು ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಮತ್ತು ಡಿವೈಎಸ್ಪಿ ಅರುಣ್ ನಾಗೇಗೌಡ ಅವರ ನಿರ್ದೇಶನದಂತೆ ಪುತ್ತೂರು ನಗರ ಪೊಲೀಸ್ ಠಾಣೆಯ ಇನ್‍ಸ್ಪೆಕ್ಟರ್ ಜಾನ್ಸನ್ ಡಿಸೋಜ ಅವರ ಮಾರ್ಗದರ್ಶನದಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯ ಹೆಡ್‍ಕಾನ್‍ಸ್ಟೇಬಲ್ ವಸಂತ ಗೌಡ ಅವರು ಮಂಗಳೂರು ಬರ್ಕೆ ಪೊಲೀಸರ ಸಹಾಯದಿಂದ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News