ವಿದ್ಯಾರ್ಥಿ ಆತ್ಮ ಹತ್ಯೆ
Update: 2024-11-07 16:42 GMT
ಸುಳ್ಯ: ಆಲೆಟ್ಟಿ ಗ್ರಾಮದ ಕಲ್ಲೆಂಬಿ ಎಂಬಲ್ಲಿ ಸುಳ್ಯದಲ್ಲಿ ಕಾನೂನು ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಸಂಜೆ ನಡೆದಿದೆ.
ಆಲೆಟ್ಟಿಯ ಕಲ್ಲೆಂಬಿ ರಾಘವ ಬೆಳ್ಚಪ್ಪಾಡ ಎಂಬವರ ಪುತ್ರ ಮಿಥುನ್ ರಾಜ್(26) ಎಂಬ ಯುವಕ ಮನೆಯಲ್ಲಿ ಯಾರು ಇಲ್ಲದೆ ಸಂದರ್ಭ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯವರು ಸುಳ್ಯಕ್ಕೆ ಮದುವೆಗೆಂದು ಬಂದಿರುವ ಸಂದರ್ಭದಲ್ಲಿ ಕೃತ್ಯವೆಸಗಿಕೊಂಡಿದ್ದು ಮನೆಯವರು ಹಿಂತಿರುಗಿ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಸುಳ್ಯ ಪೊಲೀಸರು ಆಗಮಿಸಿ ಮಹಜರು ನಡೆಸಿ ಸರಕಾರಿ ಆಸ್ಪತ್ರೆಯಲ್ಲಿ ಶವದ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಮೃತಪಟ್ಟ ಯುವಕ ಸುಳ್ಯದ ಕೆ.ವಿ.ಜಿ.ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಯಾಗಿದ್ದು ತಾಯಿ, ಸಹೋದರ, ಸಹೋದರಿ ಇದ್ದಾರೆ.