ನಿಟ್ಟೆ ತಾಂತ್ರಿಕ ಕಾಲೇಜಿನಲ್ಲಿ ಅಂತರ್-ಕಾಲೇಜು ವೇಟ್‌ ಲಿಫ್ಟಿಂಗ್

Update: 2024-11-09 16:29 GMT

ನಿಟ್ಟೆ: ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ವೈಟ್ ಲಿಫ್ಟಿಂಗ್, ಪವರ್ ಲಿಫ್ಟಿಂಗ್ (ಪುರುಷರ ಹಾಗೂ ಮಹಿಳೆಯರ) ಮತ್ತು ಬೆಸ್ಟ್ ಫಿಸಿಕ್ (ಪುರುಷರ ವಿಭಾಗ) ಸ್ಪರ್ಧೆ ಹಾಗೂ ಆಯ್ಕೆ ಪ್ರ್ರಕ್ರಿಯೆ ನಿಟ್ಟೆಯ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಬಿಸಿ ಆಳ್ವ ಒಳಾಂಗಣ ಕ್ರೀಡಾಂಗಣದಲ್ಲಿ ನ.8ರಂದು ನಡೆಯಿತು.

ನಿಟ್ಟೆ ತಾಂತ್ರಿಕ ಕಾಲೇಜಿನ ಹಳೆಯ ವಿದ್ಯಾರ್ಥಿ ಮತ್ತು ಬೆಂಗಳೂರಿನ ಕನೆಕ್ಟ್‌ಎಮ್ ಟೆಕ್ನಾಲಜಿ ಸೊಲ್ಯೂಷನ್ಸ್ ಪ್ರೈ. ಲಿ. ನಲ್ಲಿ ಹಿರಿಯ ಎಂಬೆಡ್ಡೆಡ್ ಫರ್ಮ್ವೇರ್ ಇಂಜಿನಿಯರ್ ಆಗಿರುವ ವೈಭವ್ ವಿ. ಪ್ರಭು ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತ ನಾಡಿ ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ಡಿಪ್ಲೊಮ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿರುವ ಸಂದರ್ಭದಲ್ಲಿ ತಮ್ಮನ್ನು ತಾವು ಕ್ರೀಡಾಪಟುವಾಗಿ ರೂಪಿಸಿಕೊಳ್ಳುವಲ್ಲಿ ಪಟ್ಟ ಶ್ರಮವನ್ನು ನೆನಪಿಸಿಕೊಂಡು ನಿರಂತರ ಅಭ್ಯಾಸದ ಮಹತ್ವವನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಕಾಮನ್ವೆಲ್ತ್ ಚಿನ್ನದ ಪದಕ ವಿಜೇತ ವೈಟ್ ಲಿಫ್ಟರ್ ಮತ್ತು ಕೆನರಾ ಬ್ಯಾಂಕಿನ ನಿವೃತ್ತ ಹಿರಿಯ ಮ್ಯಾನೇಜರ್ ಪುಷ್ಪರಾಜ ಹೆಗ್ಡೆ ಅವರು ನಿಟ್ಟೆ ಸಮೂಹ ಸಂಸ್ಥೆ ಕ್ರೀಡೆಗೆ ಕೊಡುತ್ತಿರುವ ಬೆಂಬಲ ಹಾಗೂ ಪ್ರೋತ್ಸಾಹವನ್ನು ಶ್ಲಾಘಿಸಿದರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ. ನಿರಂಜನ್ ಎನ್ ಚಿಪ್ಲುಂಕರ ಮಾತನಾಡಿ ಸಮಗ್ರ ಶಿಕ್ಷಣದಲ್ಲಿ ಕ್ರೀಡೆಯ ಮಹತ್ವವನ್ನು ತಿಳಿಸಿದರು ಮತ್ತು ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವವನ್ನು ಬೆಳೆಸುವಲ್ಲಿ ಸಂಸ್ಥೆಯ ಆಡಳಿತ ಮಂಡಳಿಯ ಪ್ರಯತ್ನವನ್ನು ತಿಳಿಸಿದರು.

ವೇದಿಕೆಯಲ್ಲಿ ದೈಹಿಕ ಶಿಕ್ಷಣ ನಿರ್ದೇಶಕಿ ಸೌಜನ್ಯ ಹಾಗೂ ನಿಟ್ಟೆ ಪಾಲಿಟೆಕ್ನಿಕ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಗಂಗಾಧರ್ ಪೂಜಾರಿ ಉಪಸ್ಥಿತರಿದ್ದರು.

ನಿಟ್ಟೆ ತಾಂತ್ರಿಕ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಗಣೇಶ್ ಪೂಜಾರಿ ಸ್ವಾಗತಿಸಿದರು. ವಿದ್ಯಾರ್ಥಿನಿ ಅನ್ವಿತಾ ಅತಿಥಿಗಳನ್ನು ಪರಿಚಯಿಸಿದರು. ನಿಟ್ಟೆ ಕ್ಯಾಂಪಸ್‌ನ ಕ್ರೀಡಾ ಆಡಳಿತಾಧಿಕಾರಿ ಶ್ಯಾಮಸುಂದರ್ ಎಂ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News