ಸಿಎಂ ಸಿದ್ದರಾಮಯ್ಯ, ಡಿಕೆಶಿ, ಪ್ರಿಯಾಂಕ್ ಖರ್ಗೆ ವಿರುದ್ಧ ನಿಂದನೆ: ಬಜ್ಪೆ ಪೊಲೀಸ್ ಠಾಣೆಗೆ ದೂರು
ಬಜ್ಪೆ: ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿ, ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ವೀಡಿಯೋ ಹರಿಯಬಿಟ್ಟಿರುವ ಮೋಹಿತ್ ನರಸಿಂಹಮೂರ್ತಿ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ, ಕೆಪಿಸಿಸಿ ಸದಸ್ಯ ಪೃಥ್ವಿರಾಜ್ ನೇತೃತ್ವದ ನಿಯೋಗ ರವಿವಾರ ಬಜ್ಪೆ ಪೊಲೀಸ್ ನಿರೀಕ್ಷಕ ಸಂದೀಪ್ ಜಿ.ಎಸ್ ಅವರಿಗೆ ಮನವಿ ಸಲ್ಲಿಸಿತು.
ಕಾಂಗ್ರೆಸ್‍ನ ಹಿರಿಯ ನಾಯಕರನ್ನು ಅವಮಾನಿಸುವುದರ ಜೊತೆಗೆ ಎರಡು ಪಂಗಡಗಳ ವ್ಯಕ್ತಿಗಳ ಮಧ್ಯೆ ದ್ವೇಷ ಪ್ರಚೋ ದಿಸುವುದು ಕಿಡಿಗೇಡಿಯ ಉದ್ದೇಶವಾಗಿದೆ. ಮೋಹಿತ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 196, 352 ಮತ್ತು 353ರನ್ವಯ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ನಿಯೋಗ ಆಗ್ರಹಿಸಿತು.
ಆರ್.ಕೆ. ಪೃಥ್ವಿರಾಜ್ ನೇತೃತ್ವದ ನಿಯೋಗದಲ್ಲಿ ಗುರುಪುರ ಬ್ಲಾಕ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅಬ್ದುಲ್ ಅಝೀಝ್ ಭಾಷಾ, ಗಂಜಿಮಠ ವಲಯ ಕಾಂಗ್ರೆಸ್ ಅಧ್ಯಕ್ಷ ಮುಸ್ತಫ, ಪಡುಪೆರಾರ ವಲಯ ಕಾಂಗ್ರೆಸ್ ಅಧ್ಯಕ್ಷ ಹಲ್ಯರ್ ಇಕ್ಬಾಲ್, ಜಿಪಂ ಮಾಜಿ ಸದಸ್ಯ ಕೃಷ್ಣ ಅಮೀನ್, ತಾಪಂ ಮಾಜಿ ಸದಸ್ಯ ಸುನಿಲ್ ಗಂಜಿಮಠ, ಪಡುಪೆರಾರ ಗ್ರಾಮ ಪಂಚಾಯತ್ ಸದಸ್ಯ ಭಾಸ್ಕರ ಮಲ್ಲಿ, ಡಿಸಿಸಿ ಸದಸ್ಯ ಜೆರಾಲ್ಡ್ ಸಿಕ್ವೇರ ಕೊಳಂಬೆ, ಪಕ್ಷದ ಯುವ ನಾಯಕ ಅಬ್ದುಲ್ ಹಮೀದ್ ಎಡಪದವು ಉಪಸ್ಥಿತರಿದ್ದರು.