ʼಬಹುಸಂಸ್ಕೃತಿ’ ಉತ್ಸವದ ಲೋಗೊ ಅನಾವರಣ

Update: 2024-11-16 13:56 GMT

ಮಂಗಳೂರು: ತುಳು, ಬ್ಯಾರಿ, ಕೊಂಕಣಿ, ಅರೆಭಾಷೆ, ಕೊಡವ ಮತ್ತು ಯಕ್ಷಗಾನ ಅಕಾಡಮಿಗಳ ಜಂಟಿ ಆಶ್ರಯದಲ್ಲಿ ಡಿ.3 ಮತ್ತು 4ರಂದು ಮಂಗಳೂರಿನಲ್ಲಿ ನಡೆಯಲಿರುವ ’ಬಹುಸಂಸ್ಕೃತಿ’ ಉತ್ಸವದ ಲೋಗೊ ಬಿಡುಗಡೆ ಕಾರ್ಯಕ್ರಮವು ಶನಿವಾರ ದ.ಕ. ಜಿಲ್ಲಾಧಿಕಾರಿಯ ಕಚೇರಿಯಲ್ಲಿ ನಡೆಯಿತು.

ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಲೊಗೋ ಬಿಡುಗಡೆ ಮಾಡಿದರು. ಶಾಸಕ ರಾಜೇಶ್ ನಾಯ್ಕ್, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ತುಳು ಅಕಾಡಮಿ ಅಧ್ಯಕ್ಷ ತಾರನಾಥ್ ಕಾಪಿಕಾಡ್, ಬ್ಯಾರಿ ಅಕಾಡಮಿ ಅಧ್ಯಕ್ಷ ಉಮರ್ ಯು.ಹೆಚ್., ಕೊಂಕಣಿ ಅಕಾಡಮಿ ಅಧ್ಯಕ್ಷ ಸ್ಟ್ಯಾನಿ ಆಲ್ವಾರಿಸ್, ಅರೆಭಾಷೆ ಅಕಾಡಮಿಯ ಅಧ್ಯಕ್ಷ ಸದಾನಂದ ಮಾವಾಜಿ, ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್, ಜಿಪಂ ಸಿಇಒ ಡಾ. ಆನಂದ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಯತೀಶ್ ಎನ್., ಮಂಗಳೂರು ಮನಪಾ ಕಮಿಷನರ್ ಕೆ.ಎಲ್. ಆನಂದ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News