ಮಂಗಳೂರು| ಅಕ್ರಮ ಮರಳುಗಾರಿಕೆ ಅಡ್ಡೆಗಳಿಗೆ ಗಣಿ ಮತ್ತು ಕಂದಾಯ ಇಲಾಖೆ ದಾಳಿ
Update: 2024-11-16 15:45 GMT
ಮಂಗಳೂರು: ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಶನಿವಾರ ಗಣಿ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ದೋಣಿಗಳನ್ನು ವಶಪಡಿಸಿದ್ದಾರೆ.
ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಗುರುಪುರ ಫಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ್ದ ಸ್ಥಳಕ್ಕೆ ದಾಳಿ ಮಾಡಿದರು.
ಈ ಸಂದರ್ಭ ಸ್ಥಳದಲ್ಲಿದ್ದ ೫ ದೋಣಿಗಳನ್ನು ಒಂದು ಮೋಟಾರು, ಗ್ಯಾಸ್ ಸಿಲಿಂಡರ್ ವಶಪಡಿಸಲಾಯಿತು. ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ್ರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ತಹಶೀಲ್ದಾರ್ ಪ್ರಶಾಂತ್ ಪಾಟೀಲ್, ಗಣಿ ಇಲಾಖೆಯ ಭೂವಿಜ್ಞಾನಿ ಗಿರೀಶ್ ಮೋಹನ್ ಮತ್ತಿತರರು ಉಪಸ್ಥಿತರಿದ್ದರು.