ಮಂಗಳೂರು: ವಕ್ಫ್ ಮಂಡಳಿಯ ವಿರುದ್ಧ ಬಿಜೆಪಿ ಪ್ರತಿಭಟನೆ
Update: 2024-11-22 12:45 GMT
ಮಂಗಳೂರು, ನ.22: ರೈತರ ಭೂಮಿಯನ್ನು ಅತಿಕ್ರಮಿಸಲು ವಕ್ಫ್ ಮಂಡಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಸಹಕರಿಸುತ್ತಿದೆ ಎಂದು ಆರೋಪಿಸಿ ಱನಮ್ಮ ಭೂಮಿ ನಮ್ಮ ಹಕ್ಕುೞ ಘೋಷಣೆಯಡಿ ಶುಕ್ರವಾರ ನಗರದ ಪುರಭವನದ ಮುಂದಿನ ರಾಜಾಜಿ ಪಾರ್ಕ್‌ನಲ್ಲಿ ಭಜನಾ ಸಂಕೀರ್ತನೆಯೊಂದಿಗೆ ದ.ಕ. ಜಿಲ್ಲಾ ಬಿಜೆಪಿ ಪ್ರತಿಭಟನೆ ನಡೆಸಿದೆ.
ಪುರಭವನದ ಮುಂದಿನ ಅಂಬೇಡ್ಕರ್ ಹಾಗೂ ಮಹಾತ್ಮಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಆರಂಭಿಸ ಲಾದ ಪ್ರತಿಭಟನೆಯಲ್ಲಿ ಸಂಸದ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ರಾಜೇಶ್ ನಾಯ್ಕ್, ಮೇಯರ್ ಮನೋಜ್ ಕುಮಾರ್, ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಮುಖಂಡರಾದ ಮೋನಪ್ಪಭಂಡಾರಿ, ಪ್ರೇಮಾನಂದ ಶೆಟ್ಟಿ, ರಾಜೇಶ್ ಕಾವೇರಿ, ನಂದನ್ ಮಲ್ಯ, ರಾಜಗೋಪಾಲ ರೈ, ಯತೀಶ್ ಆರ್ವಾರ್, ಗುರುಪ್ರಸಾದ್, ಪೂಜಾ ಪೈ, ಶಕೀಲ ಕಾವಾ, ಪೂರ್ಣಿಮಾ, ಕಿರಣ್ ಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು.