ಅಲ್ಪಸಂಖ್ಯಾತರ ಸ್ವಯಂ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ

Update: 2024-11-22 15:10 GMT

ಮಂಗಳೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಬೌದ್ಧ, ಕ್ರಿಶ್ಚಿಯನ್,ಜೈನ್, ಮುಸ್ಲಿಂ, ಪಾರ್ಸಿ ಸಿಖ್ ಜನಾಂಗದ 2024-25ನೇ ಸಾಲಿಗೆ ನಿಗಮವು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ನಿರುದ್ಯೋಗಿ ಯುವಕ-ಯುವತಿಯರಿಗೆ ಸ್ವಯಂ ಉದ್ಯೋಗ ಅಥವಾ ಎಂಎನ್‌ಸಿ, ಬಿಪಿಒಗಳು ಮತ್ತಿತರ ಚಟುವಟಿಕೆಗಳಲ್ಲಿ ಉದ್ಯೋಗಕ್ಕಾಗಿ ಹೆವಿ ವೆಹಿಕಲ್‌ಡ್ರೈವಿಂಗ್, ಡ್ರೋನ್ ಚಾಲನ ತರಬೇತಿ, ಬ್ಯೂಟಿ ಪಾರ್ಲರ್ ಕೋರ್ಸ್ (ಮಹಿಳೆಯರಿಗೆ) ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು ರಾಜ್ಯದ ಧಾರ್ಮಿಕ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು.ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು. 18ರಿಂದ 45 ವರ್ಷ ಪ್ರಾಯದೊಳಗಿರಬೇಕು. ಕುಟುಂಬದ ವಾರ್ಷಿಕ ಆದಾಯ 6 ಲಕ್ಷಕ್ಕಿಂತ ಕಡಿಮೆಯಿರಬೇಕು. ಆಯ್ಕೆಯಾದ ಅರ್ಜಿದಾರರು ಕಡ್ಡಾಯವಾಗಿ ತರಬೇತಿಯನ್ನು ಪೂರ್ಣಗೊಳಿಸಬೇಕು.

ಕನಿಷ್ಟ ಎಸೆಸ್ಸೆಲ್ಸಿ ವಿದ್ಯಾರ್ಹತೆ ಹೊಂದಿರಬೇಕು. ಈ ಹಿಂದೆ ರಾಜ್ಯ ಅಥವಾ ಕೇಂದ್ರ ಸರಕಾರದ ಯಾವುದೇ ಯೋಜನೆಗಳಲ್ಲಿ ತರಬೇತಿ ಪಡೆದಿರಬಾರದು. ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್ kmdconline.karnataka.gov.in ಮೂಲಕ ಡಿಸೆಂಬರ್ 5ರೊಳಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ) ಮೌಲಾನಾ ಆಜಾದ್ ಭವನ 2ನೇ ಮಹಡಿ, ಪಾಂಡೇಶ್ವರ, ಮಂಗಳೂರು ತಾಲೂಕು-575001 (ಜಿಲ್ಲಾ ವ್ಯವಸ್ಥಾಪಕರ ದೂ.ಸಂ: 0824-2951644/ಸಹಾಯವಾಣಿ ಸಂಖ್ಯೆ: 8277799990), ಬಂಟ್ವಾಳ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಕೆಳಗಿನ ಮಹಡಿ, ಭಾರತ್ ಕಮರ್ಶಿಯಲ್ ಕಾಂಪ್ಲೆಕ್ಸ್, ಬಿ.ಸಿ.ರೋಡು ದೂ.ಸಂ: 08255-232470, ಬೆಳ್ತಂಗಡಿ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ತಾಪಂ ವಾಣಿಜ್ಯ ಸಂಕೀರ್ಣ ಕಟ್ಟಡ, ಬೆಳ್ತಂಗಡಿ ದೂ.ಸಂ: 08256-295335, ಪುತ್ತೂರು ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ತಾಪಂ ಸಾಮರ್ಥ್ಯ ಸೌಧ ಕಟ್ಟಡ, ಪುತ್ತೂರು ದೂ.ಸಂ: 08251-237078, ಸುಳ್ಯ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ತಾಪಂ ಕಟ್ಟಡ, ಸುಳ್ಯ ದೂ.ಸಂ: 08257 -230666ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News