ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ| ಅತ್ಯಂತ ಉದ್ದದ ಮಾನವ ಸರಪಳಿ: ದ.ಕ. ಜಿಲ್ಲೆ ದ್ವಿತೀಯ ಸ್ಥಾನ

Update: 2024-11-23 13:52 GMT

ಮಂಗಳೂರು: ಕರ್ನಾಟಕ ಸರಕಾರವು ಸೆ.15ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವ ಜಾಗೃತಿ ಮೂಡಿಸಲು ಬೀದರ್‌ನಿಂದ ಚಾಮರಾಜನಗರ ಜಿಲ್ಲೆಯವರೆಗೆ ಆಯೋಜಿಸಿದ್ದ ಮಾನವ ಸರಪಳಿ ನಿರ್ಮಾಣದಲ್ಲಿ ಅತ್ಯಂತ ಉದ್ದದ ಮಾನವ ಸರಪಳಿ ನಿರ್ಮಾಣದ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದೆ.

ರಾಜ್ಯ ಮಟ್ಟದಲ್ಲಿ ನಡೆದ ಈ ಮಾನವ ಸರಪಳಿ ವಿಶಿಷ್ಟ ದಾಖಲೆ ನಿರ್ಮಿಸಿ ವರ್ಲ್ಡ್ ಆಫ್ ರೆಕಾರ್ಡ್‌ಗೆ ಸೇರ್ಪಡೆಗೊಂಡಿದೆ. ಕಾರ್ಯಕ್ರಮದ ಅಂಗವಾಗಿ ನಡೆದ ಮಾನವ ಸರಪಳಿ ಮತ್ತು ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜಿಲ್ಲೆಗಳನ್ನು ಐದು ವಿಭಾಗಗಳಲ್ಲಿ ವಿಂಗಡಿಸಿ ತಲಾ ಮೂರು ಪ್ರಶಸ್ತಿಗಳನ್ನು ನೀಡಲು ತೀರ್ಮಾನಿಸಲಾಗಿತ್ತು. ಅದರಂತೆ ಮಾನವ ಸರಪಳಿ ನಾವಿನ್ಯತೆ, ಅತ್ಯಂತ ಉದ್ದದ ಮಾನವ ಸರಪಳಿ, ಅತಿ ಹೆಚ್ಚು ಗಿಡಗಳನ್ನು ನೆಡುವುದು, ಅತಿ ಹೆಚ್ಚು ಸ್ವಯಂ ಸೇವಾ ಸಂಘಗಳ ಭಾಗವಹಿಸುವಿಕೆ, ಅತಿ ಹೆಚ್ಚಾಗಿ ಖಾಸಗಿ ಕಂಪನಿಗಳ ಭಾಗವಹಿಸುವಿಕೆ ಈ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ನೀಡಲಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ನ. 26ರಂದು ಬೆಳಗ್ಗೆ 11ಕ್ಕೆ ಬೆಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆಯಲಿದ್ದು, ಮುಖ್ಯಮಂತ್ರಿ ಪ್ರಶಸ್ತಿ ವಿತರಣೆ ಮಾಡಲಿದ್ದಾರೆ ಎಂದು ಕರ್ನಾಟಕ ವಸತಿ ಮತ್ತು ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯ ನಿರ್ವಾಹಕ ನಿರ್ದೇಶಕ ಕಾಂತರಾಜು ಪಿ.ಎಸ್.ರವರು ದ.ಕ. ಜಿಲ್ಲಾಧಿಕಾರಿಗೆ ಕಳುಹಿಸಿರುವ ಪತ್ರದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News