‘ರೋಟರಿ ಚಿಣ್ಣರ ಉತ್ಸವ’, ಸಾಂಸ್ಕೃತಿಕ ಸ್ಪರ್ಧಾ ಕೂಟ

Update: 2024-11-24 16:51 GMT

ಮಂಗಳೂರು: ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್, ರೋಟರಿ ಮಂಗಳೂರು ಸೆಂಟ್ರಲ್ ಫೌಂಡೇಶನ್ ಮತ್ತು ರೋಟರ್ಯಾಕ್ಟ್ ಕ್ಲಬ್ ಮಂಗಳೂರು ಸಿಟಿ ಸಂಯುಕ್ತಾಶ್ರಯದಲ್ಲಿ 24ನೇ ವಾರ್ಷಿಕ ‘ರೋಟರಿ ಚಿಣ್ಣರ ಉತ್ಸವ’ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧಾ ಕೂಟ ಉರ್ವ ಕೆನರಾ ಹೈಸ್ಕೂಲ್ ಆವರಣದಲ್ಲಿ ರವಿವಾರ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಮಾತನಾಡಿ, ಹೆತ್ತವರ ಪ್ರೀತಿ ವಾತ್ಸಲ್ಯದಿಂದ ವಂಚಿತ ಮಕ್ಕಳ ಉತ್ಸಾಹಕ್ಕೆ ಸ್ಪಂದಿಸಿ ಪ್ರೋತ್ಸಾಹ ನೀಡುವ ರೋಟರಿ ಸಂಸ್ಥೆಯ ನಿಸ್ವಾರ್ಥ ಸಮಾಜ ಸೇವಾ ಮನೋಭಾವ ಪ್ರಶಂಸನೀಯ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿದ್ದ ರೋಟರಿ 3181 ವಲಯ 2ರ ಸಹಾಯಕ ಗವರ್ನರ್ ಕೃಷ್ಣ ಎಂ. ಹೆಗ್ಡೆ ಮಾತನಾಡಿ, ಕಳೆದ 24 ವರ್ಷಗಳಿಂದ ರೋಟರಿ ಚಿಣ್ಣರ ಉತ್ಸವ ಆಯೋಜಿಸಿಕೊಂಡು ಬರುತ್ತಿದ್ದು, ವಿದ್ಯಾರ್ಥಿಗಳು ಈ ಕಾರ್ಯಕ್ರಮಕ್ಕೆ ಇನ್ನಷ್ಟು ಮೆರುಗು ನೀಡಿದ್ದಾರೆ. ಎಂದರು.

ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಅಧ್ಯಕ್ಷ ಬ್ರಾಯಾನ್ ಪಿಂಟೊ ಅಧ್ಯಕ್ಷತೆ ವಹಿಸಿದ್ದರು.

ಚಿಣ್ಣರ ಉತ್ಸವದಲ್ಲಿ 10 ಅನಾಥಾಶ್ರಮದ ಸುಮಾರು 450ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ವಿವಿಧ ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ಕ್ರೀಡಾ ಸ್ಪರ್ಧೆಗಳೊಂದಿಗೆ ಆರಂಭಗೊಂಡ ಉತ್ಸವ ಬಳಿಕ ಗಾನ, ನೃತ್ಯ, ನಾಟಕ ಸಹಿತ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮುಕ್ತಾಯಗೊಂಡಿತು.

ರೋಟರಿ ಕ್ಲಬ್ ಕಾರ್ಯದರ್ಶಿ ರಾಜೇಶ್ ಸೀತಾರಾಮ, ಮಂಗಳೂರು ಸೆಂಟ್ರಲ್ ಕಾರ್ಯದರ್ಶಿ ಅಕ್ಷಯ್ ಬಿ.ರೈ, ಚಿಣ್ಣರ ಬಣ್ಣ ಉತ್ಸವ ಚೇರ್‌ಮೆನ್ ರೊನಾಲ್ಡ್ ಮೆಂಡೋನ್ಸಾ, ರೋಟರಿ ಮಂಗಳೂರು ಸೆಂಟ್ರಲ್ ಫೌಂಡೇಶನ್ ಅಧ್ಯಕ್ಷ, ಕ್ಲಬ್‌ನ ಸ್ಥಾಪಕಾಧ್ಯಕ್ಷ ಪ್ರೇಮನಾಥ ಕುಡ್ವ, ರೋಟರಿ ಮಾಜಿ ಅಸಿಸ್ಟೆಂಟ್ ಗವರ್ನರ್ ರಾಜ್ ಗೋಪಾಲ್ ರೈ, ಮಾಜಿ ಅಧ್ಯಕ್ಷ ರಾಜೇಶ್ ಶೆಟ್ಟಿ, ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ, ಕಾರ್ಯಕ್ರಮ ಸಂಯೋಜಕ ಕರಣ್ ಜೈನ್, ಪ್ರಮುಖರಾದ ಸಾಯಿಬಾಬ ರಾವ್, ರಾಮ್‌ದಾಸ್, ರವಿಜಲಾನ್, ಜಗನ್ನಾಥ ಶೆಟ್ಟಿ, ಶೆಲ್ಡನ್ ಕ್ರಾಸ್ತಾ, ಜನಾರ್ದನ ಆಳ್ವ, ವಿಕಾಸ್, ಪೂರ್ಣಿಮ ರೈ, ಪ್ರಮೀಳ ಸಹಿತ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News