ಸಖಿ ಒನ್ ಸ್ಟಾಪ್ ಸೆಂಟರ್ : ಗ್ರೂಪ್ ಡಿ ಹುದ್ದೆಗೆ ಅರ್ಜಿ ಆಹ್ವಾನ
Update: 2024-11-26 13:55 GMT
ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಮಿಷನ್ ಶಕ್ತಿ ಯೋಜನೆಯ ಸಂಬಾಲ್ ಉಪ ಯೋಜನೆ ಯಡಿ ಕಾರ್ಯನಿರ್ವಹಿಸುತ್ತಿರುವ ಸಖಿ ಒನ್ ಸ್ಟಾಪ್ ಸೆಂಟರ್‌ಗೆ ಹೊರಗುತ್ತಿಗೆ ಆಧಾರದ ಮೇರೆಗೆ ಗ್ರೂಪ್ ಡಿ (ಸ್ವಚ್ಛತಾ/ ಭದ್ರತಾ ಸಿಬ್ಬಂದಿ)-1 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಎಸೆಸೆಲ್ಸಿ ಉತ್ತೀರ್ಣರಾಗಿರಬೇಕು. ಕೆಲಸದಲ್ಲಿ ಅನುಭವ ಹೊಂದಿರಬೇಕು. ಆಸಕ್ತರು ಸೂಕ್ತ ದಾಖಲೆಗಳೊಂದಿಗೆ ಉಪ ನಿರ್ದೇಶಕರ ಕಚೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, 2ನೇ ಮಹಡಿ, ಸ್ತ್ರೀ ಶಕ್ತಿ ಭವನ, ಮೆಸ್ಕಾಂ ಬಳಿ, ಬಿಜೈ ಮಂಗಳೂರು ಇಲ್ಲಿಗೆ ನ.30ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಉಪನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.