ಮಂಗಳೂರು: ಸಂವಿಧಾನ ಸನ್ಮಾನ್ ಅಭಿಯಾನಕ್ಕೆ ಚಾಲನೆ
ಮಂಗಳೂರು: ಕೇಂದ್ರದಲ್ಲಿ ಕಾಂಗ್ರೆಸ್ ಆಡಳಿತ ನಡೆಸಿದ 65 ವರ್ಷಗಳಲ್ಲಿ ಸಂವಿಧಾನಕ್ಕೆ ತಿದ್ದುಪಡಿ ತಂದು ಅಪಚಾರ ಎಸೆಗಿದೆ. ಅಲ್ಲದೆ ಸಂವಿಧಾನಶಿಲ್ಪಿಡಾ.ಬಾಬಾ ಸಾಹೇಬ್ ಅಂಬೇಡ್ಕರ್‌ಗೂ ಅಪಮಾನ ಮಾಡಿದೆ. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಸಂವಿಧಾನಕ್ಕೆ ತಿದ್ದುಪಡಿಸಿ ತಂದು ದಲಿತರಿಗೆ ಗೌರವ ನೀಡಿದ್ದಾರೆ. ಅಲ್ಲದೆ ಅಂಬೇಡ್ಕರ್ ಆಶಯ ವನ್ನು ಸಾಕಾರಗೊಳಿಸುತ್ತಿದ್ದಾರೆ ಎಂದು ಮಾಜಿ ಸಚಿವ ಎನ್.ಮಹೇಶ್ ಹೇಳಿದ್ದಾರೆ.
ಸಿಟಿಜನ್ ಫಾರ್ ಸೋಶಿಯಲ್ ಜಸ್ಟೀಸ್ ವತಿಯಿಂದ ನಗರದ ಸ್ಕೌಟ್ ಆ್ಯಂಡ್ ಗೈಡ್ಸ್ ಭವನದಲ್ಲಿ ಮಂಗಳವಾರ ನಡೆದ ಸಂವಿಧಾನ ದಿನ-ಸಂವಿಧಾನ ಸನ್ಮಾನ್ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸಂವಿಧಾನ ರಕ್ಷಕರು ಎಂದು ಹೇಳಿಕೊಳ್ಳುತ್ತಿರುವ ಕಾಂಗ್ರೆಸ್ ಅಂಬೇಡ್ಕರ್‌ರನ್ನು ಜಾತಿಗೆ ಸೀಮಿತಗೊಳಿಸಿದೆ. ಅಂಬೇಡ್ಕರ್ ಬಗ್ಗೆ ಎಡಪಂಥೀಯ ಹಾಗೂ ಕಾಂಗ್ರೆಸ್ ಪಕ್ಷದ ಧೋರಣೆಯನ್ನು ಭೇದಿಸಿ ಅವರ ನಿಜವಾದ ವ್ಯಕ್ತಿತ್ವವನ್ನು ಅನಾವರಣ ಮಾಡಬೇಕಾಗಿದೆ ಎಂದರು.
ಅಭಿಯಾನದ ರಾಜ್ಯ ಸಹ ಸಂಚಾಲಕ ವಿಕಾಸ್ ಪುತ್ತೂರು, ಜಿಲ್ಲಾ ಸಂಚಾಲಕ ಪ್ರೇಮಾನಂದ ಶೆಟ್ಟಿ ಮಾತನಾಡಿದರು. ಕುಲಶೇಖರ ವೀರನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಸುರೇಶ್ ಕುಲಾಲ್ ಅಧ್ಯಕ್ಷತೆ ವಹಿಸಿದ್ದರು.
ಕಚ್ಚೂರು ಮಾಲ್ದಿದೇವಿ ದೇವಸ್ಥಾನದ ಅಧ್ಯಕ್ಷ ಶಿವಪ್ಪನಂತೂರು, ಅಭಿಯಾನ ಸಮಿತಿ ಸಹ ಸಂಚಾಲಕರಾದ ಮುರಳಿಕೃಷ್ಣ ಹಸಂತಡ್ಕ, ಕವಿತಾ ಸನಿಲ್ ಉಪಸ್ಥಿತರಿದ್ದರು. ವಿನಯನೇತ್ರ ದಡ್ಡಲಕಾಡ್ ನಿರೂಪಿಸಿದರು.