ನಕಲಿ ಇ-ಚಲನ್ ಕಳುಹಿಸಿ ವಂಚನೆ: ಪ್ರಕರಣ ದಾಖಲು

Update: 2024-11-26 17:04 GMT

ಮಂಗಳೂರು: ಸಂಚಾರ ನಿಯಮ ಉಲ್ಲಂಘನೆಯ ಬಗ್ಗೆ ನಕಲಿ ಇ-ಚಲನ್ ಕಳುಹಿಸಿ ವ್ಯಕ್ತಿಯೊಬ್ಬರ ಖಾತೆಯಿಂದ 1.31 ಲ.ರೂ. ಹಣವನ್ನು ವರ್ಗಾಯಿಸಿಕೊಂಡ ಬಗ್ಗೆ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ.24ರಂದು ತನಗೆ ವಾಟ್ಸ್‌ಆ್ಯಪ್ ನಂಬರ್‌ವೊಂದರಿಂದ ಮೆಸೇಜ್ ಬಂದಿದ್ದು, ಅದನ್ನು ಡೌನ್‌ಲೋಡ್ ಮಾಡಿದಾಗ ತನ್ನ ಮೊಬೈಲ್‌ಗೆ 16 ಒಟಿಪಿಗಳು ಬಂದಿದ್ದವು. ಬಳಿಕ ಫ್ಲಿಪ್‌ಕಾರ್ಟ್ ಹಾಗೂ ಅಮೆಜಾನ್‌ನಲ್ಲಿ ತನ್ನ ಕ್ರೆಡಿಟ್ ಕಾರ್ಡ್ ಮೂಲಕ 30,400 ರೂ., ಡೆಬಿಟ್ ಕಾರ್ಡ್ ಮೂಲಕ 16,700 ರೂ. ಮತ್ತು ಪೇ ಲೇಟರ್‌ನಲ್ಲಿ 71,496 ರೂ. ಹಣ ವರ್ಗಾವಣೆಯಾದ ಬಗ್ಗೆ ಮೊಬೈಲ್‌ಗೆ ಮೆಸೇಜ್ ಬಂತು. ತಕ್ಷಣ ತಾನು ಮೊಬೈಲ್ ಮೂಲಕ ಡೆಬಿಟ್ ಕಾರ್ಡ್ ಹಾಗೂ ಕ್ರೆಡಿಟ್ ಕಾರ್ಡ್‌ನ್ನು ಬ್ಲಾಕ್ ಮಾಡಿದೆ. ಯಾರೋ ಅಪರಿಚಿತರು ಎಪಿಕೆ ಫೈಲ್ ಮೂಲಕ ತನ್ನ ಡೆಬಿಟ್, ಕ್ರೆಡಿಟ್ ಕಾರ್ಡ್‌ನ ಮಾಹಿತಿ ಪಡೆದು ಫ್ಲಿಪ್‌ಕಾರ್ಟ್‌ನಲ್ಲಿ 39,398 ರೂ. ಮೌಲ್ಯದ ವನ್‌ಪ್ಲಸ್ ಮೊಬೈಲ್, 32,398 ರೂ. ಮೌಲ್ಯದ ಮೊಟೊರೊಲಾ ಎಜ್ ಮೊಬೈಲ್, 12,800 ರೂ. ಮೌಲ್ಯದ ಏರ್ ಪೋಡ್, 14,700 ರೂ., 29,400 ರೂ., 3,000 ರೂ. ಮೌಲ್ಯದ ಫ್ಲಿಪ್‌ಕಾರ್ಟ್ ವೋಚರ್‌ಗಳನ್ನು ಹೊಸದಿಲ್ಲಿಯ ವಿಳಾಸದಲ್ಲಿರುವ ವ್ಯಕ್ತಿಗೆ ಆರ್ಡರ್ ಮಾಡಿ 1,31,396 ರೂ. ವಂಚಿಸಿದ್ದಾರೆ ಎಂದು ಹಣ ಕಳಕೊಂಡ ವ್ಯಕ್ತಿ ದೂರಿನಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News