ವಾಯುಭಾರ ಕುಸಿತ: ಕರಾವಳಿಯಲ್ಲಿ ಚಳಿ ಹೆಚ್ಚಳ ಸಾಧ್ಯತೆ

Update: 2024-11-29 17:46 GMT

ಮಂಗಳೂರು, ನ.29: ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿಯ ಗ್ರಾಮೀಣ ಭಾಗದಲ್ಲಿ ಗುರುವಾರ ರಾತ್ರಿ ಹೆಚ್ಚು ಚಳಿಯ ಅನುಭವವಾಗಿದ್ದು, ಮುಂದಿನ ಒಂದು ವಾರಕ್ಕೂ ಅಧಿಕ ಕಾಲ ಚಳಿಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ತಾಪಮಾನದಲ್ಲಿ 3-4 ಡಿ.ಸೆ. ತಗ್ಗಲಿದೆ. ಜಿಲ್ಲೆಯಲ್ಲಿ ಹಗಲು ವೇಳೆ ಪ್ರಖರ ಬಿಸಿಲಿನ ಮತ್ತು ಸಂಜೆ ಚಳಿಯ ವಾತಾವರಣ ಇರಲಿದೆ. ಮುಂದಿನ ವಾರಗಳಲ್ಲಿ ತಾಪಮಾನ ಇನ್ನಷ್ಟು ಕಡಿಮೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರಾವಳಿಯ ಗ್ರಾಮೀಣ ಪ್ರದೇಶದಲ್ಲಿ ಸರಾಸರಿ ಕನಿಷ್ಠ ತಾಪಮಾನವು 22-23 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯಬಹುದು. ಶುಕ್ರವಾರ 30 ಡಿಗ್ರಿ ಸೆಲ್ಸಿಯೆಸ್ ಗರಿಷ್ಠ, 22.9 ಡಿಗ್ರಿ ಸೆಲ್ಸಿಯೆಸ್ ಉಷ್ಣಾಂಶ ದಾಖಲಾಗಿದೆ.

ಕಳೆದ ಎರಡು ದಿನಗಳಿಂದ ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಸಹಿತ ಹಲವು ಕಡೆಗಳಲ್ಲಿ ರಾತ್ರಿ ವೇಳೆ ಅತೀ ಹೆಚ್ಚು ಮಂಜು ಆವರಿಸಿತ್ತು. ಈ ಮಧ್ಯೆ ಶಿರಾಡಿ ಹಾಗೂ ಚಾರ್ಮಾಡಿ ಘಾಟಿ ಪ್ರದೇಶಗಳಲ್ಲಿ ತಗ್ಗು ಪ್ರದೇಶಕ್ಕಿಂತಲೂ ಅಧಿಕ ಪ್ರಮಾಣದಲ್ಲಿ ಮಂಜು ಆವರಿಸಿಕೊಳ್ಳುತ್ತಿದೆ. ಹಗಲಿನಲ್ಲಿ ಜಾಸ್ತಿ ಬಿಸಿಯಾಗಿರದ ಉತ್ತಮ ವಾತಾವರಣವಿದ್ದರೂ ಮಧ್ಯಾಹ್ನ 12ರಿಂದ 2ರವರೆಗೆ ಸೆಖೆಯ ಅನುಭವವಾಗುತ್ತಿದೆ ಎಂದು ಹೇಳಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News