ಗುರುಪುರ ಕೈಕಂಬ: ಪೊಲೀಸ್ ಕಮಿಷನರ್ ವರ್ಗಾವಣೆಗೆ ಆಗ್ರಹಿಸಿ ಪ್ರತಿಭಟನೆ

Update: 2024-12-02 15:55 GMT

ಮಂಗಳೂರು : ಮಂಗಳೂರು ಪೊಲೀಸ್ ಆಯುಕ್ತರನ್ನು ವರ್ಗಾಯಿಸಬೇಕು ಎಂದು ಆಗ್ರಹಿಸಿ ಗುರುಪುರ ಕಕಂಬದಲ್ಲಿ ಸೋಮವಾರ ಸಿಪಿಎಂ ಗುರುಪುರ ವಲಯ ಸಮಿತಿಯ ವತಿಯಿಂದ ಪ್ರತಿಭಟನೆ ನಡೆಯಿತು.

ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಕೆ. ಯಾದವ ಶೆಟ್ಟಿ, ಗುರುಪುರ ವಲಯ ಕಾರ್ಯದರ್ಶಿ ಸದಾಶಿವದಾಸ್ ಮಾತನಾಡಿದರು.

ಪ್ರತಿಭಟನೆಯಲ್ಲಿ ಸಿಪಿಎಂ ಜಿಲ್ಲಾ ಮುಖಂಡರಾದ ಮನೋಜ್ ವಾಮಂಜೂರ್, ವಸಂತಿ ಕುಪ್ಪೆಪದವು, ವಲಯ ಸಮಿತಿ ಸದಸ್ಯರಾದ ಅಶೋಕ್ ಬಂಗೇರ, ನೋಣಯ್ಯ ಗೌಡ, ಬಾಬು ಸಾಲ್ಯಾನ್, ವಾರಿಜ ಕುಪ್ಪೆಪದವು, ಗೋಪಾಲ ಮಳಲಿ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News