ಸೋಮೇಶ್ವರ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

Update: 2024-12-11 14:11 GMT

ಉದಯ್ ಕುಮಾರ್

ಉಳ್ಳಾಲ: ಸೋಮೇಶ್ವರ ಕಡಲ ತೀರದ ರುದ್ರಪಾದೆಯಲ್ಲಿ ಪರ್ಸ್, ಚಪ್ಪಲ್, ಕೂಲಿಂಗ್ ಗ್ಲಾಸ್ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಸಮುದ್ರ ತೀರದಲ್ಲಿ ಪತ್ತೆಯಾಗಿದೆ.

ಮಂಗಳೂರಿನ ಪಡೀಲು, ವೀರನಗರ ನಿವಾಸಿ ಉದಯ್ ಕುಮಾರ್ (46) ಮೃತರು ಎಂದು ಗುರುತಿಸಲಾಗಿದೆ.

ಉದಯ್ ಅವರು ಬುಧವಾರ ಮಧ್ಯಾಹ್ನ ಸೋಮೇಶ್ವರ ಸೋಮನಾಥ ಕ್ಷೇತ್ರದ ಎದುರು ತನ್ನ ದ್ವಿಚಕ್ರ ವಾಹನ ನಿಲ್ಲಿಸಿ ಸಮುದ್ರ ತೀರದ ರುದ್ರಪಾದೆಯತ್ತ ತೆರಳಿದ್ದರೆನ್ನಲಾಗಿದೆ. ರುದ್ರ ಪಾದೆಯಲ್ಲಿ ಪರ್ಸ್ , ಚಪ್ಪಲ್, ಕೂಲಿಂಗ್ ಗ್ಲಾಸನ್ನ ಬಿಟ್ಟು ನಾಪತ್ತೆಯಾಗಿದ್ದರು. ಬೀಚಲ್ಲಿ ಸುತ್ತಾಡುತ್ತಿದ್ದ ಹುಡಗನೋರ್ವ ರುದ್ರಪಾದೆಯಲ್ಲಿದ್ದ ಪರ್ಸನ್ನು ಸ್ಥಳೀಯ ಗೂಡಂಗಡಿ ಮಾಲಕರಲ್ಲಿ ನೀಡಿದ್ದಾನೆ. ಗೂಡಂಗಡಿ ಮಾಲಕರು ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ.

ಕರಾವಳಿ ಕಾವಲು ಪಡೆಯ ಜೀವರಕ್ಷಕ ಸಿಬ್ಬಂದಿ ಸೇರಿದಂತೆ ಸ್ಥಳೀಯ ಈಜುಗಾರರು ಉದಯ್ ಅವರನ್ನು ಸಮುದ್ರದಲ್ಲಿ ರಬ್ಬರ್ ಟ್ಯೂಬ್ ಮೂಲಕ ಶೋಧಿಸಿದ್ದಾರೆ. ಬುಧವಾರ ಸಂಜೆ ವೇಳೆ ಸೋಮೇಶ್ವರ ಕಡಲ ಕಿನಾರೆಯ ಅಲಿಮಕಲ್ಲು ಎಂಬಲ್ಲಿ ಉದಯ್ ಅವರ ಮೃತದೇಹ ಪತ್ತೆಯಾಗಿದೆ.

ಮೇಲ್ನೋಟಕ್ಕೆ ಉದಯ್ ಅವರು ರುದ್ರಪಾದೆಯಿಂದ ಸಮುದ್ರಕ್ಕೆ ಜಿಗಿದು ಆತ್ಮಹತ್ಯೆಗೈದಿರುವುದಾಗಿ ಹೇಳಲಾಗುತ್ತಿದ್ದು, ಸ್ಥಳಕ್ಕೆ ಭೇಟಿ ನೀಡಿದ ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾಣಿಸಿದ್ದಾರೆ. ಮೃತ ಉದಯ್ ಅವರು ಪದವಿನಂಗಡಿಯಲ್ಲಿ ಕಟ್ಟಡ ಕಾಮಗಾರಿಯ ಬಿಡಿಭಾಗಗಳ ಮಾರಾಟದ ಅಂಗಡಿ ಹೊಂದಿದ್ದರು.

ಮೃತರು ತಂದೆ, ತಾಯಿ, ಪತ್ನಿ, ಪುತ್ರನನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News