ವಿಮೆನ್ ಇಂಡಿಯಾ ಮೂವ್ಮೆಂಟ್ ಕರ್ನಾಟಕ ರಾಜ್ಯ ಸಮಿತಿ ಸಭೆ
ಮಂಗಳೂರು: ವಿಮೆನ್ ಇಂಡಿಯಾ ಮೂವ್ಮೆಂಟ್ ಕರ್ನಾಟಕ ರಾಜ್ಯ ಸಮಿತಿ ಸಭೆಯು ರಾಜ್ಯಾಧ್ಯಕ್ಷೆ ಫಾತಿಮಾ ನಸೀಮಾ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆಯಿತು.
ಸಭೆಯಲ್ಲಿ ರಾಜ್ಯದ ಮಹಿಳೆಯರ ಸ್ಥಿತಿಗತಿಗಳ ಬಗ್ಗೆ ಚರ್ಚಿಸಲಾಯಿತು. ಅಲ್ಲದೆ ಸರಕಾರಿ ಶಾಲೆಗಳಲ್ಲಿ ಹೆಚ್ಚಿನ ಶಿಕ್ಷಕರನ್ನು ನೇಮಿಸಬೇಕು. ಬಾಣಂತಿಯರ ಜೀವದೊಂದಿಗೆ ಚೆಲ್ಲಾಟವಾಡಿದ ಬಳ್ಳಾರಿ ಜಿಲ್ಲಾಸ್ಪತ್ರೆಯ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು.ಎಸ್‌ಡಿಪಿಐ ಬೆಳಗಾವಿ ಚಲೋ ಅಂಬೇಡ್ಕರ್ ಜಾಥಾ-೨ರ ಷರತ್ತುಗಳನ್ನು ತಕ್ಷಣ ಈಡೇರಿಸಬೇಕು. ಮುಸ್ಲಿಮರನ್ನು ಶೈಕ್ಷಣಿಕವಾಗಿ, ಔದ್ಯೋಗಿಕವಾಗಿ ಮೂಲೆಗುಂಪಾಗಿಸುವ ೨ಬಿ ಮೀಸಲಾತಿ ರದ್ದತಿಯನ್ನು ವಾಪಸ್ ಪಡೆದು ಶೇ.8ಕ್ಕೇರಿಸಬೇಕು. ಕಾಂತರಾಜು ಆಯೋಗದ ವರದಿಯನ್ನು ಜಾರಿಗೊಳಿಸಬೇಕು. ಕೇಂದ್ರ ಸರಕಾರದ ವಕ್ಫ್ ತಿದ್ದುಪಡಿ ಮಸೂದೆಯನ್ನು ಜಾರಿಗೊಳಿಸುವುದಿಲ್ಲವೆಂದು ಸದನದಲ್ಲಿ ನಿರ್ಣಯ ಕೈಗೊಳ್ಳಬೇಕು. ಬಜೆಟ್‌ನಲ್ಲಿ ಘೋಷಿಸಿ ದಂತೆ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ 10 ಸಾವಿರ ಕೋ.ರೂ.ವನ್ನು ಮೀಸಲಿಡಬೇಕು ಎಂದು ಸಭೆಯು ಒತ್ತಾಯಿಸಿದೆ.
ಸಭೆಯಲ್ಲಿ ಉಪಾಧ್ಯಕ್ಷೆ ಶಾಝಿಯ ಬೆಂಗಳೂರು, ಕಾರ್ಯದರ್ಶಿ ಝುಲೈಖಾ, ಶಾಹಿದಾ ತಸ್ನೀಮ್, ಶಬಾನ ಬೆಂಗಳೂರು, ಜಬೀನ್ ಮೈಸೂರು, ರೂಬಿ ಹಾಸನ ಉಪಸ್ಥಿತರಿದ್ದರು. ರಾಜ್ಯ ಪ್ರಧಾನ ಕಾರ್ಯದರ್ಶಿ ನಸ್ರಿಯಾ ಬೆಳ್ಳಾರೆ ಸ್ವಾಗತಿಸಿ ದರು. ರಾಜ್ಯ ಕಾರ್ಯದರ್ಶಿ ಸಾನಿಯಾ ಮೈಸೂರು ವಂದಿಸಿದರು.