ಕಾರ್ಮಿಕ ವರ್ಗಕ್ಕೆ ದ್ರೋಹವೆಸಗಿದ ಯಾವುದೇ ಸರಕಾರಗಳು ಉಳಿದಿಲ್ಲ: ಸುನಿಲ್ ಕುಮಾರ್ ಬಜಾಲ್

Update: 2024-12-18 13:40 GMT

ಮಂಗಳೂರು: ಸಮಾಜದ ಅಭಿವೃದ್ಧಿಯಲ್ಲಿ ಕಾರ್ಮಿಕ ವರ್ಗದ ಪಾತ್ರವೇ ಮುಖ್ಯವಾಗಿದೆ. ಅಂತಹ ಕಾರ್ಮಿಕ ವರ್ಗದ ಉತ್ತಮ ಬದುಕಿಗಾಗಿ ಅವಿಶ್ರಾಂತವಾಗಿ ಶ್ರಮಿಸಬೇಕಾದ ಆಳುವ ವರ್ಗಗಳು ನಿರಂತರವಾಗಿ ಬಂಡವಾಳಶಾಹಿಗಳ ಹಿತಾಸಕ್ತಿಗಳನ್ನು ಕಾಪಾಡಲು ಹಾತೊರೆಯುತ್ತಿದೆ. ಸ್ವಾತಂತ್ರ್ಯ ಭಾರತದ ಇತಿಹಾಸದಲ್ಲಿ ಕಾರ್ಮಿಕ ವರ್ಗಕ್ಕೆ ದ್ರೋಹ ವೆಸಗಿದ ಯಾವುದೇ ಸರಕಾರಗಳು ಇವತ್ತಿನವರೆಗೆ ಉಳಿದಿಲ್ಲ ಎಂದು ಸಿಐಟಿಯು ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಹೇಳಿದರು.

ಬೆಳಗಾವಿ ಅಧಿವೇಶನ ನಡೆಯುತ್ತಿರುವ ಸಂದರ್ಭ ಕಾರ್ಮಿಕ ವರ್ಗದ ಪ್ರಶ್ನೆಗಳು ಪ್ರಧಾನ ಚರ್ಚೆಗೆ ಒಳಪಡಿಸುವ ಉದ್ದೇಶ ದಿಂದ ಸಿಐಟಿಯು ರಾಜ್ಯಾದ್ಯಂತ ಹೋರಾಟ ನಡೆಸಲು ಕರೆ ನೀಡಿರುವ ಹಿನ್ನೆಲೆಯಲ್ಲಿ ಸಿಐಟಿಯು ನೇತೃತ್ವದಲ್ಲಿ ಬುಧವಾರ ನಗರದಲ್ಲಿ ನಡೆದ ಪ್ರತಿಭಟನಾ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಿಐಟಿಯು ನಾಯಕರಾದ ಸುಕುಮಾರ್ ತೊಕ್ಕೊಟ್ಟು, ಯೋಗೀಶ್ ಜಪ್ಪಿನಮೊಗರು, ವಸಂತ ಆಚಾರಿ, ಬಿ.ಎಂ.ಭಟ್, ಜಯಂತಿ ಶೆಟ್ಟಿ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಕಾರ್ಮಿಕ ವಿರೋಧಿ ನೀತಿಗಳನ್ನು ತರಾಟೆಗೆ ತೆಗೆದುಕೊಂಡರು.

ಪ್ರತಿಭಟನೆಯಲ್ಲಿ ರೈತ ಸಂಘಟನೆಯ ನಾಯಕರಾದ ಕೃಷ್ಣಪ್ಪ ಸಾಲ್ಯಾನ್, ಸದಾಶಿವದಾಸ್,ಯುವಜನ ಮುಖಂಡರಾದ ಜಗದೀಶ್ ಬಜಾಲ್, ಸಿಐಟಿಯು ನಾಯಕರಾದ ರಾಧಾ ಮೂಡಬಿದ್ರೆ, ಭವಾನಿ ವಾಮಂಜೂರು, ರೋಹಿದಾಸ್, ಸುಂದರ ಕುಂಪಲ,ನೋಣಯ್ಯ ಗೌಡ, ಯಶೋಧಾ ಮಳಲಿ, ಲಕ್ಷ್ಮಿ, ಗಿರಿಜಾ ಮೂಡುಬಿದಿರೆ, ಲೋಲಾಕ್ಷಿ, ನಾಗೇಶ್ ಕೋಟ್ಯಾನ್, ಭಾರತಿ ಬೋಳಾರ, ಜಯಲಕ್ಷ್ಮಿ, ದಿನೇಶ್ ಶೆಟ್ಟಿ, ಮುಝಫರ್, ಸಂತೋಷ್ ಆರ್.ಎಸ್, ವಿಜಯ, ಚಂದ್ರಹಾಸ, ರಫೀಕ್ ಹರೇಕಳ, ಕೃಷ್ಣಪ್ಪ ಮೂಡುಬಿದಿರೆ, ಸೀತಾರಾಮ್ ಶೆಟ್ಟಿ, ಜಯಂತ ನಾಯಕ್, ವಿಲಾಸಿನಿ, ಗಿರಿಜಾ, ಪುಷ್ಪಾಮತ್ತಿತರರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News