ಅಖಿಲ ಭಾರತ ಬ್ಯಾರಿ ಮಹಾಸಭಾದಿಂದ ಸಮಾಲೋಚನೆ
Update: 2024-12-18 15:37 GMT
ಮಂಗಳೂರು: ಅಖಿಲ ಭಾರತ ಬ್ಯಾರಿ ಮಹಾಸಭಾ ವತಿಯಿಂದ ಜ.8ರಂದು ನಗರದ ಪುರಭವನದಲ್ಲಿ ನಡೆಸಲು ಉದ್ದೇಶಿತ ದ.ಕ. ಬ್ಯಾರಿ ಜಿಲ್ಲಾ ಪ್ರತಿನಿಧಿ ಸಮಾವೇಶ ಕಾರ್ಯಕ್ರಮದ ಪೂರ್ವಸಿದ್ಧತೆ ಮತ್ತು ಪ್ರಚಾರ ಕಾರ್ಯ ಇತ್ಯಾದಿ ರೂಪು ರೇಷೆಗಳ ಬಗ್ಗೆ ಅಖಿಲ ಭಾರತ ಬ್ಯಾರಿ ಮಹಾಸಭಾದ ಅಧ್ಯಕ್ಷ ಅಬ್ದುಲ್ ಅಝೀಝ್ ಬೈಕಂಪಾಡಿ ನೇತೃತ್ವದ ನಿಯೋಗವು ಉಳ್ಳಾಲ ಸಯ್ಯದ್ ಮದನಿ ದರ್ಗಾ ಮತ್ತು ಕೇಂದ್ರ ಜುಮ್ಮಾ ಮಸೀದಿಯ ಅಧ್ಯಕ್ಷ ಹನೀಫ್ ಹಾಜಿ ಮತ್ತಿತರರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಲಾಯಿತು.
ಸಮಾವೇಶದ ಪ್ರಚಾರಾರ್ಥ ಡಿ.20ರಂದು ಉಳ್ಳಾಲದಲ್ಲಿ ಕರಪತ್ರ ಬಿಡುಗಡೆ ಮಾಡಲು ನಿರ್ಧರಿಸಲಾಯಿತು. ಈ ಸಂದರ್ಭ ಅಬ್ದುಲ್ ಜಲೀಲ್ ಕೃಷ್ಣಾಪುರ, ಅಶ್ರಫ್ ಬದ್ರಿಯಾ, ಹಮೀದ್ ಕಿನ್ಯ, ಅಬ್ದುರ‌್ರಹ್ಮಾನ್ ಕೋಡಿಜಾಲ್, ಅಬ್ದುಲ್ ಖಾದರ್ ಇಡ್ಮಾ ಮತ್ತಿತರರು ಉಪಸ್ಥಿತರಿದ್ದರು.