ಮಂಗಳೂರು: ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
ಬೆಂಗಳೂರು: ಮಂಗಳೂರಿನಲ್ಲಿ ರಾಜ್ಯ ಉಚ್ಚ ನ್ಯಾಯಲಯದ ಪೀಠ ಸ್ಥಾಪನೆ ಮಾಡಬೇಕು ಎಂದು ಆಗ್ರಹಿಸಿ ಹೋರಾಟ ಸಮಿತಿಯ ಸಂಚಾಲಕ ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜರ ನೇತೃತ್ವದಲ್ಲಿ ವಿಧಾನ ಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್‌ರ ಸಮ್ಮುಖದಲ್ಲಿ ಮಂಗಳೂರು ವಕೀಲರ ಸಂಘದ ಪರವಾಗಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭ ಶಾಸಕರಾದ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ, ಕಿಶೋರ್ ಕುಮಾರ್, ಮಂಜುನಾಥ್ ಭಂಡಾರಿ, ವಕೀಲರ ಸಂಘದ ಅಧ್ಯಕ್ಷ ಎಚ್.ವಿ. ರಾಘವೇಂದ್ರ, ಹಿರಿಯ ವಕೀಲ ಎಂ.ಪಿ. ನೊರೂನ್ಹ, ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಹಿರಿಯ ವಕೀಲ ಟಿ. ನಾರಾಯಣ ಪೂಜಾರಿ, ಯಶವಂತ ಮರೋಳಿ, ಸಂಘದ ಉಪಾಧ್ಯಕ್ಷ ಸುಜಿತ್ ಕುಮಾರ್, ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ರಿಚರ್ಡ ಡಿಕೊಸ್ತಾ, ಶಾಲಿನಿ, ಸುಮನಾ ಶರಣ್, ಸಂತೋಷ್ ಕುಮಾರ್, ದಿನಕರ್ ಶೆಟ್ಟಿ, ರಾಘವೇಂದ್ರ ರಾವ್, ಪ್ರಮೋದ್ ಕೆರ್ವಾಶೆ, ಜಗದೀಶ್ ಕೆ.ಆರ್., ವಿಜಯ್ ಮಹಾತೇಶ್, ಸತೀಶ್ ಕುಮಾರ್, ವೀರೇಂದ್ರ ಸಿದ್ದಕಟ್ಟೆ ಉಪಸ್ಥಿತರಿದ್ದರು.