ದ.ಕ.ಜಿಲ್ಲಾ ಉಸ್ತುವಾರಿ ಸಚಿವರ ಪರಿಷ್ಕೃತ ಪ್ರವಾಸ ಕಾರ್ಯಕ್ರಮ

Update: 2024-12-19 13:47 GMT

ಮಂಗಳೂರು,ಡಿ.19: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಡಿ.21 ಮತ್ತು 23ರಂದು ದ.ಕ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಡಿ.21ರಂದು ಬೆಳಗ್ಗೆ 10:15ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮನ, 10:45ಕ್ಕೆ ಬಂಟ್ವಾಳ ತಾಲೂಕು ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಪ್ರೌಢಶಾಲೆಯಲ್ಲಿ ವಿಜ್ಞಾನ ಕೇಂದ್ರ ಉದ್ಘಾಟನೆ ಮತ್ತು ವಾರ್ಷಿಕೋತ್ಸವ, 11ಕ್ಕೆ ಪಾಣೆಮಂಗಳೂರು ಬೊಂಡಾಲದಲ್ಲಿ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ ಉದ್ಘಾಟನೆ, 12ಕ್ಕೆ ಪುತ್ತೂರು ಪುರಭವನದಲ್ಲಿ ಪುತ್ತೂರು ಉಪಕೇಂದ್ರ ಕಟ್ಟಡಗಳ ಶಂಕುಸ್ಥಾಪನೆ, ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ ಉದ್ಘಾಟನೆ, ಕಾರ್ಮಿಕ ಇಲಾಖೆಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ವಿವಿಧ ಟೂಲ್ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಮಧ್ಯಾಹ್ನ 1ಕ್ಕೆ ಉಪ್ಪಿನಂಗಡಿಯಲ್ಲಿ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ ಉದ್ಘಾಟನೆ, 2:15ಕ್ಕೆ ಬೆಳ್ತಂಗಡಿ ತಾಲೂಕು ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ, ಅಪರಾಹ್ನ 3:15ಕ್ಕೆ ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಬಿಪಿಎಚ್ ಲ್ಯಾಬ್ ಕಟ್ಟಡ ಉದ್ಘಾಟನೆ, ಸಂಜೆ 5ಕ್ಕೆ ಮಂಗಳೂರಿನಲ್ಲಿ ಕರಾವಳಿ ಉತ್ಸವ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 6:10ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ಸಚಿವರು ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.

ಡಿ.23ರಂದು ಬೆಳಗ್ಗೆ 10:15ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮನ, 10:45ಕ್ಕೆ ಮಂಗಳೂರು ಬೀದಿಬದಿ ವ್ಯಾಪಾರಸ್ಥರ ವಲಯ ಉದ್ಘಾಟನೆ, 11ಕ್ಕೆ ದ.ಕ.ಜಿಪಂ ನೇತ್ರಾವತಿ ಸಭಾಂಗಣದಲ್ಲಿ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ, ಮಧ್ಯಾಹ್ನ 1:30ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕಲ್ಯಾಣ ಮಂಟಪದಲ್ಲಿ ಶಾಸಕ ಉಮಾನಾಥ ಕೋಟ್ಯಾನ್‌ರ ಪುತ್ರನ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಮಧ್ಯಾಹ್ನ 2ಕ್ಕೆ ಬೀಚ್ ಫೆಸ್ಟಿವಲ್ ಕರ್ಟನ್ ರೈಸಿಂಗ್ ಕಾರ್ಯಕ್ರಮ, 2:30ಕ್ಕೆ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಮುಂದುವರಿದ ಸಭೆ, ಸಂಜೆ 5:30ಕ್ಕೆ ತೊಕ್ಕೊಟ್ಟುವಿನಲ್ಲಿ ಶಾಸಕ ಐವನ್ ಡಿಸೋಜ ನೇತೃತ್ವದ ಕ್ರಿಸ್ಮಸ್ ಮತ್ತು ಹೊಸ ವರ್ಷದ ಆಚರಣೆ ಕಾರ್ಯಕ್ರಮ, ಸಂಜೆ 6ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News