ಮಂಗಳೂರು| ಕರಾವಳಿ ಉತ್ಸವ ಪ್ರಯುಕ್ತ ಹೆಲಿಕಾಪ್ಟರ್ ರೈಡ್‌ಗೆ ಚಾಲನೆ
ಮಂಗಳೂರು: ಕರಾವಳಿ ಉತ್ಸವ ಪ್ರಯುಕ್ತ ಆರಂಭಿಸಿರುವ ಹೆಲಿಕಾಪ್ಟರ್ ಸಂಚಾರಕ್ಕೆ ನಗರದ ಮೇರಿಹಿಲ್ ಹೆಲಿಪ್ಯಾಡ್ ನಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕೃತರಾದ ಹರೇಕಳ ಹಾಜಬ್ಬ ಮತ್ತು ಅಮೈ ಮಹಾಲಿಂಗ ನಾಯಕ್ ಜಂಟಿಯಾಗಿ ಚಾಲನೆ ನೀಡಿದರು.
ಹರೇಕಳ ಹಾಜಬ್ಬ ಮತ್ತು ಅಮೈ ಮಹಾಲಿಂಗ ನಾಯಕ್ ಅವರೊಂದಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ದ.ಕ.ಜಿಪಂ ಸಿಇಒ ಡಾ. ಆನಂದ್ ಕೆ, ಪೊಲೀಸ್ ವರಿಷ್ಠಾಧಿಕಾರಿ ಯತೀಶ್, ಅರಣ್ಯ ಸಂರಕ್ಷಣಾಧಿಕಾರಿ ಆ್ಯಂಟೋನಿ ಮರಿಯಪ್ಪಹೆಲಿಕಾಪ್ಟರ್‌ನಲ್ಲಿ ಸಂಚರಿಸಿದರು.
ಬಳಿಕ ಮಾತನಾಡಿದ ಹರೇಕಳ ಹಾಜಬ್ಬ ಮತ್ತು ಮಹಾಲಿಂಗ ನಾಯಕ್ ಕರಾವಳಿ ಉತ್ಸವದ ಸೊಬಗಿಗೆ ಸಾರ್ವಜನಿಕರಿಗೆ ಹೆಲಿಕಾಪ್ಟರ್ ಸಂಚಾರ ಆರಂಭಿಸಿರುವುದು ಶ್ಲಾಘನೀಯವಾಗಿದೆ. ಪ್ರವಾಸಿಗರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪ್ರೋತ್ಸಾಹಿಸಬೇಕು ಎಂದು ಕರೆ ನೀಡಿದರು.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಾತನಾಡಿ ಕರಾವಳಿ ಉತ್ಸವವನ್ನು ಆಕರ್ಷಣೀಯವನ್ನಾಗಿಸಲು ಹೆಲಿಕಾಪ್ಟರ್ ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಹೆಲಿಕಾಪ್ಟರ್‌ನಲ್ಲಿ ಸಂಚರಿಸಿ ಮಂಗಳೂರು ನಗರವನ್ನು ವೈಮಾನಿಕ ವಾಗಿ ದರ್ಶನ ಮಾಡಿ ಹಾಗೂ ಕಡಲ ಕಿನಾರೆ ಸೌಂದರ್ಯವನ್ನು ವೀಕ್ಷಿಸಬಹುದಾಗಿದೆ ಎಂದರು.
ಖಾಸಗಿ ಸಂಸ್ಥೆಯ ಹೆಲಿಕಾಪ್ಟರ್ ಇದನ್ನು ನಡೆಸಿಕೊಡಲಿದೆ. ಜಿಲ್ಲಾಡಳಿತ ಸಹಕಾರ ನೀಡಲಿದೆ. ಪ್ರತಿ ಟ್ರಿಪ್‌ನಲ್ಲಿ 6 ಜನರಿಗೆ ಅವಕಾಶ ಇದೆ. ಮುಂದಿನ ದಿನಗಳಲ್ಲಿ ಹೆಲಿಟೂರಿಸಂ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಇದು ಹೆಚ್ಚು ಸಹಕಾರಿಯಾಗಲಿದೆ ಎಂದು ಡಿಸಿ ಅಭಿಪ್ರಾಯಪಟ್ಟರು.