ಶಿಶಿಕ್ಷು ತರಬೇತಿಗೆ ಅರ್ಜಿ ಆಹ್ವಾನ

Update: 2024-12-21 13:26 GMT

ಮಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಲ್ಲಿ ಶಿಶಿಕ್ಷು ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಎಸೆಸೆಲ್ಸಿ ಅಥವಾ ಐಟಿಐ ವಿದ್ಯಾರ್ಹತೆಯಲ್ಲಿ ಮೆಕ್ಯಾನಿಕ್ ಡಿಸೇಲ್, ಇಲೆಕ್ಟ್ರಿಷಿಯನ್, ಮೆಷಿನಿಷ್ಟ್, ಇಲೆಕ್ಟ್ರೋನಿಕ್ಸ್ ಮೆಕ್ಯಾನಿಕ್, ವೆಲ್ಡರ್, ಮೆಕ್ಯಾನಿಕ್ ಮೋಟರ್ ವೆಹಿಕಲ್, ಪ್ರೊಗ್ರಾಮ್ ಸಿಸ್ಟಮ್ ಎಡ್ಮಿನಿಸ್ಟ್ರೇಟಿವ್ ಎಸಿಸ್ಟೆಂಟ್ ವೃತ್ತಿಗಳಲ್ಲಿ ತೇರ್ಗಡೆಯಾದ ಅರ್ಹ ಅಭ್ಯರ್ಥಿಗಳು ಜನವರಿ 11ರೊಳಗೆ ಅರ್ಜಿ ಸಲ್ಲಿಸಬಹುದು.

ನಗರದ ಬಿಜೈನಲ್ಲಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಯ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಜನವರಿ 16ರಂದು ಬೆಳಗ್ಗೆ 10ಕ್ಕೆ ಮೂಲ ದಾಖಲಾತಿಗಳೊಂದಿಗೆ ಶಿಶಿಕ್ಷು ಆಯ್ಕೆ ಸಮಿತಿಯ ಮುಂದೆ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News