ಫಾದರ್ ಮುಲ್ಲರ್ ನರ್ಸಿಂಗ್ ವಿದ್ಯಾರ್ಥಿಗಳ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ

Update: 2024-12-21 13:46 GMT

ಮಂಗಳೂರು: ಕಂಕನಾಡಿಯ ಫಾದರ್ ಮುಲ್ಲರ್ ಸ್ಕೂಲ್ ಆ್ಯಂಡ್ ನರ್ಸಿಂಗ್ ಕಾಲೇಜು, ತುಂಬೆಯ ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜು ಇವುಗಳ ಸಂಯುಕ್ತ ಆಶ್ರಯದಲ್ಲಿ ಶನಿವಾರ ನರ್ಸಿಂಗ್ ವಿದ್ಯಾರ್ಥಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭ ಕನ್ವೆನ್ಷನ್ ಸೆಂಟರ್‌ನ ಮುಲ್ಲರ್ ಮಿನಿ ಸಭಾಂಗಣದಲ್ಲಿ ನಡೆಯಿತು.

ಫಾದರ್ ಮುಲ್ಲರ್ ಸ್ಕೂಲ್ ಆಫ್ ನರ್ಸಿಂಗ್‌ನ ಜಿಎನ್‌ಎಂ (ಜನರಲ್ ನರ್ಸಿಂಗ್ ಮತ್ತು ಮಿಡ್‌ವೈಫರಿ) ವಿದ್ಯಾರ್ಥಿಗಳ 67 ನೇ ಬ್ಯಾಚ್, ಎಫ್‌ಎಂಸಿಒಎನ್‌ನ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳ ೩೮ ನೇ ಬ್ಯಾಚ್ ಮತ್ತು ಎ ತುಂಬೆಯ ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜ್‌ನ ಬಿಎಸ್ಸಿ ನರ್ಸಿಂಗ್‌ನ ೩ನೇ ಬ್ಯಾಚ್‌ನ ವಿದ್ಯಾರ್ಥಿಗಳು ಪ್ರತಿಜ್ಞೆ ಸ್ವೀಕರಿಸಿದರು. ಫಾದರ್ ಮುಲ್ಲರ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜಿನ ಉಪಪ್ರಾಂಶುಪಾಲರಾದ ಡಾ.ವಿಲ್ಮಾ ಮೀರಾ ಡಿಸೋಜ ಮುಖ್ಯ ಅತಿಥಿಯಾಗಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ನರ್ಸಿಂಗ್ ಕಾಲೇಜಿಗೆ ನೂತನ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಫಾದರ್ ಮುಲ್ಲರ್ ಸ್ಕೂಲ್ ಆಫ್ ನರ್ಸಿಂಗ್ ಮತ್ತು ಕಾಲೇಜು ಆಫ್ ನರ್ಸಿಂಗ್‌ನ ಪ್ರಾಂಶುಪಾಲ ಸಿಸ್ಟರ್ ಧನ್ಯಾ ದೇವಾಸಿಯಾ ಪ್ರತಿಜ್ಞಾ ವಿಧಿ ಬೋಧಿಸಿದರು. ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ನಿರ್ದೇಶಕ ರೆ.ಫಾ. ರಿಚರ್ಡ್ ಅಲೋಶಿಯಸ್ ಕೊಯೆಲ್ಹೊ ಅಧ್ಯಕ್ಷತೆ ವಹಿಸಿದ್ದರು.

ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್‌ನ ಆಡಳಿತಾಧಿಕಾರಿ ಫಾ. ಅಜಿತ್ ಬಿ ಮೆನೆಜಸ್, ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆ, ನರ್ಸಿಂಗ್ ಕಾಲೇಜು ಮತ್ತು ಅಲೈಡ್ ಹೆಲ್ತ್ ಸೈನ್ಸಸ್‌ನ ಆಡಳಿತಾಧಿ ಕಾರಿಫಾದರ್ ಸಿಲ್ವೆಸ್ಟರ್ ವಿನ್ಸೆಂಟ್ ಲೋಬೊ, ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಆಡಳಿತಾಧಿಕಾರಿ ಫಾ.ಜಾರ್ಜ್ ಜೀವನ್ ಸಿಕ್ವೇರಾ, ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಮುಖ್ಯ ನರ್ಸಿಂಗ್ ಅಧಿಕಾರಿ ಸಿಸ್ಟರ್ ನ್ಯಾನ್ಸಿ ಮಥಾಯಿಸ್ ಉಪಸ್ಥಿತರಿದ್ದರು.

ಸಿಸ್ಟರ್ ಲವಿತಾ ಡಯಾಸ್ ಮತ್ತು ಡಾ.ಎಡ್ವೀನಾ ಫಿಲಿಪ್ ಮೋನಿಸ್ ಕಾರ್ಯಕ್ರಮ ನಿರೂಪಿಸಿದರು. ಎಫ್‌ಎಂಎನ್‌ಸಿಟಿ ಪ್ರಾಂಶುಪಾಲ ಡಾ. ಜೂಡಿ ಎಸ್‌ಐಸಿ ವಂದಿಸಿದರು. 







 

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News